ಬೆಂಗಳೂರು, ಜುಲೈ 01: ಕರ್ನಾಟಕ ಕಾಂಗ್ರೆಸ್‌ನಲ್ಲಿ ಚಟುವಟಿಕೆ ಜೋರಾಗಿದೆ. ಡಿ. ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ, ಹೆಚ್ಚುವರಿ ಡಿಸಿಎಂಗಳ ನೇಮಕ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಬಹಿರಂಗವಾಗಿಯೇ ಚರ್ಚೆಗಳು ಆರಂಭವಾಗಿವೆ.ಈ ಚರ್ಚೆಗಳು ಹೈಕಮಾಂಡ್ ತನಕವೂ ತಲುಪಿದೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಹೀಗೆ ಎರಡು ಬಣ ರಾಜಕೀಯವಿದೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಈಗ ಇದೇ ರೀತಿ ಹೈಕಮಾಂಡ್‌ನಲ್ಲಿಯೂ ಎರಡು ಬಣವಾಗಿದೆಯೇ? ಎಂಬ ಪ್ರಶ್ನೆ ಎದ್ದಿದೆ.
ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ದೆಹಲಿ ಪ್ರವಾಸದಲ್ಲಿದ್ದರು. ಉಭಯ ನಾಯಕರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ರಾಜ್ಯ ರಾಜಕೀಯದ ಬೆಳವಣಿಗೆ ಕುರಿತು ಮಾಹಿತಿ ನೀಡಿದ್ದಾರೆ.