ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಸಿಬ್ಬಂದಿಗೆ ತರಬೇತಿ: ಡಿಜಿ & ಐಜಿಪಿ ಅಲೋಕ್ ಮೋಹನ್

Ravi Talawar
ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಸಿಬ್ಬಂದಿಗೆ ತರಬೇತಿ: ಡಿಜಿ & ಐಜಿಪಿ ಅಲೋಕ್ ಮೋಹನ್
WhatsApp Group Join Now
Telegram Group Join Now

ಬೆಂಗಳೂರು: ದೇಶಾದ್ಯಂತ ಜಾರಿಯಾಗಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.

ಇಂದಿನಿಂದ ಅನುಷ್ಠಾನಕ್ಕೆ ಬಂದಿರುವ ನೂತನ ಕಾಯ್ದೆಗಳಾದ ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023, ಭಾರತೀಯ ಸಾಕ್ಷ್ಯ ಅಧಿನಿಯಮ-2023ರ ಕುರಿತು ಇಲಾಖೆಯ ಎಲ್ಲಾ 7 ವಲಯಗಳು, 6 ಕಮೀಷನರೇಟ್ ಘಟಕಗಳು ಹಾಗೂ 1,063 ಪೊಲೀಸ್ ಠಾಣೆಗಳು ಸೇರಿದಂತೆ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ. ಇನ್ನೂ ಹೆಚ್ಚಿನ ತರಬೇತಿ ಪ್ರಕ್ರಿಯೆ ಮುಂದುವರೆಯಲಿದೆ ಎಂದು ‘ಎಕ್ಸ್’ ಮೂಲಕ ಅವರು ಮಾಹಿತಿ ನೀಡಿದ್ದಾರೆ.

 

WhatsApp Group Join Now
Telegram Group Join Now
Share This Article