ವರುಣನ ಆರ್ಭಟ: ಇಂದು-ನಾಳೆ ರೆಡ್ ಅಲರ್ಟ್

Ravi Talawar
ವರುಣನ ಆರ್ಭಟ: ಇಂದು-ನಾಳೆ ರೆಡ್ ಅಲರ್ಟ್
WhatsApp Group Join Now
Telegram Group Join Now

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆ ಜಿಲ್ಲೆಯ ಶಾಲೆ ಮತ್ತು ಪಿಯುಸಿ ತರಗತಿಗಳಿಗೆ ಇಂದು ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ಗಳಿಗೆ ಇಂದು ರಜೆ ಘೋಷಿಸಿದ್ದಾರೆ.

ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

WhatsApp Group Join Now
Telegram Group Join Now
Share This Article