ಬೆಳಗಾವಿ: ಶಿವಬಸವ ನಗರದಲ್ಲಿರವ ಕಾರಂಜಿ ಮಠಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಕಾರಂಜಿ ಮಠದ ಗುರುಸಿದ್ಧ ಮಹಾಸ್ವಾಮೀಜಿ ಅವರನ್ನು ಸತ್ಕರಿಸಿ, ಆಶೀರ್ವಾದ ಪಡೆದರು.
ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಗೆಲುವು ಸಾಧಿಸಿ, ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕಾರಂಜಿ ಮಠಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ಕಾರಂಜಿ ಮಠದ ಗುರುಸಿದ್ಧ ಮಹಾಸ್ವಾಮೀಜಿ ಮಠದ ವತಿಯಿಂದ ಸತ್ಕರಿಸಿ, ಆಶೀರ್ವದಿಸಿದರು.
ಈ ವೇಳೆ ಗುರುಸಿದ್ಧ ಮಹಾಸ್ವಾಮೀಜಿ ಮಾತನಾಡಿ, ನಿಮ್ಮ ತಂದೆ, ಸತೀಶ್ ಅವರಂತಯೇ ಸಮಾಜದಲ್ಲಿ ಬೆಳೆದು, ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಬೇಕೆಂದು ಇದೇ ವೇಳೆ ಶ್ರೀಗಳು ಸಲಹೆ ನೀಡಿದರು.
ಬಸವಣ್ಣನವರ ಕನಸಿನಂತೆ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಿರುವುದು ಸಂತಸ ತಂದಿದೆ. ಅದರಲ್ಲಿಯೂ ಪ್ರಿಯಂಕಾ ಜಾರಕಿಹೊಳಿ ಅವರ ಈ ಸಾಧನೆ ಯುವತಿಯರಿಗೆ ಪ್ರೇರಣೆ ಆಗಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ರಾಮಣ್ಣ ಗುಳ್ಳಿ, ಬಸವರಾಜ ಶೇಂಗಾವಿ, ಅರ್ಜುನ ನಾಯಕವಾಡಿ, ಬಾಳೇಶ ದಾಸನಹಟ್ಟಿ ಮಲಗೌಡ ಪಾಟೀಲ್, ಮಾನವ ಬಂಧುತ್ವ ವಿಭಾಗೀಯ ಸಂಚಾಲಕ ಭರಮಣ್ಣ ತೋಳಿ, ಕೆಪಿಸಿಸಿ ಸದಸ್ಯೆ ಆಯಿಷಾ ಸನದಿ ಸೇರಿದಂತೆ ಅಪಾರ ಸಂಖ್ಯೆ ಮಹಿಳೆಯರು, ಕಾರ್ಯಕರ್ತರು ಉಪಸ್ಥಿತರಿದ್ದರು.