ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ

Ravi Talawar
ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ
WhatsApp Group Join Now
Telegram Group Join Now

ಕಲಬುರಗಿ/ಬೆಳಗಾವಿ: ಇಂದು ಬೆಳಗ್ಗಿನಿಂದಲೇ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಲಬುರಗಿ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬೆಳಗಾವಿ ಸೇರಿ 9 ಜಿಲ್ಲೆಗಳ 56 ಕಡೆಗಳಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಈ ಮೆಗಾ ದಾಳಿಯಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳು ಭಾಗವಹಿಸಿದ್ದಾರೆ.

ಧಾರವಾಡ ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಮನೆ ಮೇಲೆ ದಾಳಿ ನಡೆದಿದೆ. ಇವರು ಧಾರವಾಡದಲ್ಲಿ ಎರಡು ಕಡೆ ಪಿಜಿಗಳನ್ನು ಹೊಂದಿದ್ದಾರೆ. ಕೆಸಿಡಿ ರಸ್ತೆಯ ಸಪ್ತಾಪುರ ಹಾಗೂ ರಾಧಾಕೃಷ್ಣ ನಗರದಲ್ಲಿ ಈ ಪಿಜಿಗಳಿದ್ದು, ಎರಡೂ ಸ್ಥಳಗಳಲ್ಲೂ ಏಕಕಾಲಕ್ಕೆ ದಾಳಿ ನಡೆದಿದೆ.

ರಾಮನಗ ರಜಿಲ್ಲೆಯ ಆರೋಹಳ್ಳಿ ತಹಶೀಲ್ದಾರ್ ವಿಜಿಯಣ್ಣ ಅವರಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ದಾಳಿ ನಡೆದಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಹಾಗು ತುಮಕೂರಿನ ತಲಾ ಎರಡು ಸ್ಥಳಗಳು, ‌ರಾಮನಗರದ ಆರೋಹಳ್ಳಿ ಹಾಗೂ ಮಂಡ್ಯದ ಒಂದೆಡೆ ದಾಳಿ ನಡೆಸಲಾಗಿದೆ. ವಿಜಿಯಣ್ಣ ಈ ಮೊದಲು ಕೋಲಾರ ತಹಶೀಲ್ದಾರ್ ಆಗಿದ್ದರು. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ‌ ಪರಿಶೀಲನೆ ನಡೆಯುತ್ತಿದೆ.

ಕಲಬುರಗಿ ಬಿಬಿಎಂಪಿ ಕೆಂಗೇರಿ ವಿಭಾಗದ ಕಂದಾಯ ಅಧಿಕಾರಿ ಬಸವರಾಜ್ ಮಾಗಿ ಅವರ ಬೆಂಗಳೂರು ಹಾಗು ಕಲಬುರಗಿಯ ಎಂ.ಬಿ.ನಗರದಲ್ಲಿರುವ ನಿವಾಸದ ಮೇಲೂ ದಾಳಿ ನಡೆದಿದೆ.

ಬೆಳಗಾವಿ ಜಿಲ್ಲಾ ಪಂಚಾಯತಿ ಎಇಇ ದುರದುಂಡೇಶ್ವರ ಬನ್ನೂರ ಅವರಿಗೆ ಸೇರಿದ ಸೇರಿದ ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಗೋಕಾಕ, ಹೊನಗಾ, ಹಿಂಡಲಗಾ ಹಾಗೂ ಯಳ್ಳೂರ ಸೇರಿ 4 ಕಡೆ ದಾಳಿ ನಡೆದಿದೆ. ಗೋಕಾಕದ‌ ನಿವಾಸ, ಹೊನಗಾ ಫಾರ್ಮ್ ಹೌಸ್, ಯಳ್ಳೂರು ಮನೆ ಹಿಂಡಲಗಾ ಅಪಾರ್ಟ್ ಮೆಂಟ್​ಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ನಾಲ್ಕು ತಿಂಗಳ ಹಿಂದಷ್ಟೇ ಲೋಕಾಯುಕ್ತ ಅಧಿಕಾರಿಗಳು ಮಹಾದೇವ ಬನ್ನೂರ ಮೇಲೆ ದಾಳಿ ಮಾಡಿದ್ದರು. ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದರು.

ಮಂಡ್ಯನಗರದ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಶಿವರಾಜು ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ‌. ಎಸ್‌ಪಿ ಸುರೇಶ್ ಬಾಬು ನೇತೃತ್ವದ ತಂಡ ನಗರ ಸೇರಿದಂತೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಇಜ್ಜಲಘಟ್ಟ ಗ್ರಾಮದ ಮನೆ, ಫಾರ್ಮ್‌ಹೌಸ್, ಕ್ರಷರ್ ಹಾಗೂ ಮೈಸೂರಿನ ಶಿವರಾಜು ಅಳಿಯನ ಮನೆ ಸೇರಿದಂತೆ ವಿವಿಧೆಡೆ ಪರಿಶೀಲನೆ ಮುಂದುವರೆದಿದೆ.

WhatsApp Group Join Now
Telegram Group Join Now
Share This Article