ಖ್ಯಾತ ನಿರೂಪಕಿ ಅಪರ್ಣ ನಿಧನ : ಗಣ್ಯರಿಂದ ಸಂತಾಪ

Ravi Talawar
ಖ್ಯಾತ ನಿರೂಪಕಿ ಅಪರ್ಣ ನಿಧನ : ಗಣ್ಯರಿಂದ ಸಂತಾಪ
WhatsApp Group Join Now
Telegram Group Join Now

ಬೆಂಗಳೂರು(ಜು.11) ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಮೂರು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಇಂದು ಸಂಜೆ  ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ.

ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಇತ್ತೀಚೆಗೆ ಆಯತಪ್ಪಿ ಬಿದ್ದು ಗಾಯಮಾಡಿಕೊಂಡಿದ್ದರು. ಹೀಗಾಗಿ ಹಲವು ದಿನಗಳ ವಿಶ್ರಾಂತಿ ಪಡೆದಿದ್ದರು. ಅಪರ್ಣಾ ಸಾವು ಕನ್ನಡಗರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸಿನಿಮಾ, ಟಿವಿ, ಸಾಹಿತ್ಯ ಲೋಕ ಸೇರಿದಂತೆ ಹಲವು ದಿಗ್ಗಜರು ಅಪರ್ಣಾ ಸಾವಿನ ಸುದ್ದಿಗೆ ಆಘಾತ ವ್ಯಕ್ತಪಡಿಸಿದ್ದಾರೆ.

ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ  ಸೂಚಿಸಿದ್ದಾರೆ. ಅಪರ್ಣಾ ನಿಧನದ ಸುದ್ದಿ ಕೇಳಿ ನೋವಾಯ್ತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಅಪರ್ಣಾ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಕಂಬನಿ ಮಿಡಿದಿದ್ದಾರೆ. ಅಪರ್ಣಾ ನಿಧನಕ್ಕೆ ಬಿವೈ ವಿಜಯೇಂದ್ರ, ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ಅಪರ್ಣಾ ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ.  ಸಿನಿಮಾಗಿಂತ ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡುವ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು.

90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

WhatsApp Group Join Now
Telegram Group Join Now
Share This Article