ದೆಹಲಿ: ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಆ ಬಳಿಕ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10ರಂದು 21 ದಿನಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ತಿಹಾರ್ ಜೈಲಿಗೆ ಬಂದು ಜೂನ್ 2ರಂದು ಶರಣಾಗಿದ್ದರು.
ಅದರ ನಂತರ, ದೆಹಲಿ ರೌಸ್ ಅವೆನ್ಯೂ ಕೋರ್ಟ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿತ್ತು, ಆದರೆ ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಇಡಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತು ಮತ್ತು ಅದಕ್ಕೆ ತಡೆಯಾಜ್ಞೆ ನೀಡಿತು. ಇಡಿ ಅರ್ಜಿಯನ್ನು ಆಲಿಸಿದ ದೆಹಲಿ ಹೈಕೋರ್ಟ್ ರೂಸ್ ಅವೆನ್ಯೂ ನ್ಯಾಯಾಲಯದ ತೀರ್ಪಿಗೆ ತಡೆ ನೀಡಿತ್ತು.
ದೆಹಲಿ ಹೈಕೋರ್ಟ್ ತೀರ್ಪನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇಂದು ಅವರ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ದೆಹಲಿ ಸಿಎಂಗೆ ಮಧ್ಯಂತರ ಜಾಮೀನು ನೀಡಿದೆ.
ಬಂಧನದ ಕಾರಣ ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ಹೇಳಿದ್ದು, ಅದು ಅವರಿಗೆ ಬಿಟ್ಟ ನಿರ್ಧಾರ ಎಂದು ಹೇಳಿದೆ.