ಬೆಂಗಳೂರು: ಜುಲೈ 15ರಿಂದ 26ರವರೆಗೆ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತಲಿನ ಎರಡು ಕಿಲೋಮಿಟರ್ ವರೆಗೂ ನಿಷೇದಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.
10 ದಿನಗಳ ಕಾಲ ನಡೆಯುವ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದ್ದು, ಈ ವೇಳೆ ವಿವಿಧ ರಾಜಕೀಯ ಪಕ್ಷಗಳು, ವಿವಿದ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ, ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧತೆಯಿದೆ. ಇದರಿಂದ ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೇ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯುಂಟಾಗುವ ಸಾಧ್ಯತೆ ಹೆಚ್ಚು.
ಈ ಹಿನ್ನೆಲೆಯಲ್ಲಿ ನನಗೆ ಭಾರತೀಯ ನಾಗರಿಕ ಸುರಕ್ಷ ಸಂಹಿತೆ (ಬಿಎನ್ಎಸ್ಎಸ್) ಕಲಂ 163ನೇ ಪ್ರಕರಣದ ಅನ್ವಯ 15 ರಿಂದ 26ರವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ (ಅನುಮತಿ ಪಡೆದು ಫ್ರೀಡಂಪಾಕ್‌ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ) ಈ ಕೆಳಕೆಂಡ ನಿಬಂಧನೆಗಳಿಗೆ ಒಳಪಡುವಂತೆ ನಿಷೇಧಾಜ್ಞೆ ವಿಧಿಸಿರುವುದಾಗಿ ಅದೇಶದಲ್ಲಿ ಆಯುಕ್ತರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, 16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ ಜುಲೈ 26ರವರೆಗೆ ನಡೆಯಲಿದೆ. ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ತಿಳಿಸಿದ್ದಾರೆ. ಜುಲೈ 15 ರಂದು ಅಧಿವೇಶನ ಆರಂಭದ ದಿನ. ಇಲ್ಲಿಯವರಗೆ ನಿಧನ ಹೊಂದಿರುವ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಲಾಗುವುದು ಎಂದು ಸ್ಪೀಕರ್ ಹೇಳಿದರು.