ವಿಧಾನಸೌಧಕ್ಕೆ ಬಿಜೆಪಿ ನಾಯಕರ ಪಾದಯಾತ್ರೆ : ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹ

Ravi Talawar
ವಿಧಾನಸೌಧಕ್ಕೆ ಬಿಜೆಪಿ ನಾಯಕರ ಪಾದಯಾತ್ರೆ : ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹ
WhatsApp Group Join Now
Telegram Group Join Now

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಹಗರಣ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಶಾಸಕರ ಭವನದಲ್ಲಿ ಬಿಜೆಪಿ ನಾಯಕರು ಸೋಮವಾರ ಪ್ರತಿಭಟನೆ ನಡೆಸಿದರು. ನಂತರ ವಿಧಾನಸೌಧದವರೆಗೆ ಪಾದಯಾತ್ರೆ ಕೈಗೊಂಡರು.

ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣ ಖಂಡಿಸಿ ಅಧಿವೇಶನ ಆರಂಭಕ್ಕೂ ಮೊದಲು ಬಿಜೆಪಿ ನಾಯಕರಿಂದ ಸಾಂಕೇತಿಕ ಪ್ರತಿಭಟನೆ ನಡೆಯಿತು. ಶಾಸಕರ ಭವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಮಾಲಾರ್ಪಣೆ ಮಾಡಿದರು. ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಅರವಿಂದ್ ಬೆಲ್ಲದ್, ವಿಶ್ವನಾಥ್ ಸೇರಿದಂತೆ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾದರು.

ಮೊದಲು ಸರ್ಕಾರದ ವಿರುದ್ಧ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಬಳಿಕ ಶಾಸಕರ ಭವನದಿಂದ ವಿಧಾನಸೌಧದ ವರೆಗೂ ಪಾದಯಾತ್ರೆ ನಡೆಸಿದರು. ಅಧಿವೇಶನದಲ್ಲಿ ಮೊದಲ ದಿನದ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಾಲ್ಮೀಕಿ ನಿಗಮದ ಅಕ್ರಮ ವಿಷಯದ ಪ್ರಸ್ತಾಪ ಮಾಡಿ ಬಿಜೆಪಿ ಉಭಯ ಸದನಗಳಲ್ಲಿಯೂ ಹೋರಾಟ ಮಾಡಲು ಮುಂದಾಗಿದೆ.
WhatsApp Group Join Now
Telegram Group Join Now
Share This Article