ಬೆಂಗಳೂರು, ಜುಲೈ.15: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಇತಿಹಾಸದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ಹಣ ಲೂಟಿ ಮಾಡಲಾಗಿದೆ. ಯಾವುದೇ ಸರ್ಕಾರ ಮಾಡಿರಲಿಲ್ಲ. ದಲಿತರ ಪರ ಇದ್ದೇವೆ ಅಂತಾ ಹೇಳಿ ಅವರ ಹಣ ಕಾಂಗ್ರೆಸ್ ಲೂಟಿ ಮಾಡಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ R.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ವಿರುದ್ಧ ನಾವು ಪ್ರತಿಭಟನೆ ಮಾಡ್ತಿದ್ದೇವೆ. ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. ಸಿಎಂಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೋಡಬೇಕು. ಸದನದ ಒಳಗೂ ಹೋರಾಟ ಮಾಡುತ್ತೇವೆ. ಸಿಎಂ ಬಚಾವ್ ಆಗುವುದಕ್ಕೆ ನಿವೃತ್ತ ಜಡ್ಜ್ ಮೂಲಕ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದಾರೆ. ಸಿಎಂ ಬಚಾವ್ ಆಗೋಕೆ ನಿವೃತ್ತ ಜಡ್ಜ್ ಮುಖಾಂತರ ಇವರ ಮೇಲೆ ಆರೋಪ ಬಂದ್ರೆ ನ್ಯಾಯಂಗ ತನಿಖೆ ಆಗಬೇಕು. ಮುಡಾ ಕೇಸ್ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ R.ಅಶೋಕ್ ಒತ್ತಾಯಿಸಿದರು.
ಇನ್ನು ಮತ್ತೊಂದೆಡೆ ಮುಡಾ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಮುಡಾ ಪ್ರಕರಣದ ತನಿಖೆಯನ್ನು ಕೂಡಲೇ ಸಿಬಿಐಗೆ ಕೊಡಬೇಕು ಎಂದು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಸರ್ಕಾರದ ಅಕ್ರಮಗಳ ವಿರುದ್ಧ ಸದನದ ಹೊರಗೆ, ಒಳಗೆ ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಕೂರುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಜೀನಾಮೆ ಕೊಡುವವರೆಗೂ ನಾವು ಹೋರಾಟ ಮಾಡುತ್ತೇವೆ. ನಾಗೇಂದ್ರ ಬಂಧನವಾಗಿದ್ದಾರೆ, ಶಾಸಕ ದದ್ದಲ್ ಕಾಣೆಯಾಗಿದ್ದಾರೆ. ಕಾಣೆಯಾದ ಶಾಸಕ ದದ್ದಲ್ರನ್ನು ಸರ್ಕಾರ ಹುಡುಕಿಕೊಡಬೇಕು ಎಂದು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.