ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು

Ravi Talawar
ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು
WhatsApp Group Join Now
Telegram Group Join Now

ಬೆಂಗಳೂರು, ಜು.16:  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ. 2018-23ರ ಚುನಾವಣೆಯ ಅಫಿಡವಿಟ್​ನಲ್ಲಿ ಸಿದ್ದರಾಮಯ್ಯ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ದೂರು ಸಲ್ಲಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆ ವೇಳೆ ಸಿದ್ದರಾಮಯ್ಯ ಅವರು ನೀಡಿದ್ದ ಅಫಿಡವಿಟ್​ನಲ್ಲಿ ಪತ್ನಿ ಪಾರ್ವತಿ ಹೆಸರಿನಲ್ಲಿ 3 ಎಕರೆ 16 ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ 25 ಲಕ್ಷ ರೂ. ಎಂದು ನಮೂದಿಸಿದ್ದಾರೆ. ಆದರೆ, 2005ರಲ್ಲೇ ಈ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ ದೂರು ಸಲ್ಲಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ ವೇಳೆ 14 ಮುಡಾ ಸೈಟ್​​ಗಳ ಮೌಲ್ಯ ಕೇವಲ 8 ಕೋಟಿ ಎಂದು ಅಫಿಡವಿಟ್​​ನಲ್ಲಿ ನಮೂದಿಸಿದ್ದಾರೆ.

ಇನ್ನು ಮುಡಾದ 14 ಸೈಟ್​ಗಳ ಅಸಲಿ ಮಾರುಕಟ್ಟೆ ಮೌಲ್ಯ 34 ಕೋಟಿ ರೂಪಾಯಿಯಾಗಿದ್ದು, ಉದ್ದೇಶಪೂರ್ವಕವಾಗಿ ಸಿಎಂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿಗೆ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ಅವರು ಎರಡನೇ ದೂರು ಸಲ್ಲಿಸಿದ್ದಾರೆ. ಮುಡಾ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ತಲೆಗೆ ಮತ್ತೊಂದು ದೂರು ದಾಖಲಾಗಿದೆ.

WhatsApp Group Join Now
Telegram Group Join Now
Share This Article