ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ!

Ravi Talawar
ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ!
WhatsApp Group Join Now
Telegram Group Join Now

ಬೆಂಗಳೂರು, ಜುಲೈ 17: ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಮಸೂದೆಯು ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದಾರೆ. ‘ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಉದ್ಯಮ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024’ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ.

ಯಾವುದೇ ಉದ್ಯಮ, ಕಾರ್ಖಾನೆ ಅಥವಾ ಇತರ ಸಂಸ್ಥೆಗಳು ನಿರ್ವಹಣಾ ವಿಭಾಗಗಳಲ್ಲಿ (ಮ್ಯಾನೇಜ್​ಮೆಂಟ್) ಸ್ಥಳೀಯ ಅಭ್ಯರ್ಥಿಗಳಿಗೆ ಶೇ 50 ರಷ್ಟು ಮೀಸಲಾತಿ ನೀಡಬೇಕು. ನಿರ್ವಹಣೆಯೇತರ (ನಾನ್ ಮ್ಯಾನೇಜ್​ಮೆಂಟ್) ವಿಭಾಗಗಳಲ್ಲಿ ಶೇ 75ರಷ್ಟು ಮೀಸಲಾತಿ ನೀಡಬೇಕು.

ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷಗಳಿಂದ ವಾಸಿಸುತ್ತಿರುವವರು, ಕನ್ನಡ ಭಾಷೆಯಲ್ಲಿ ಮಾತಾಡಲು, ಓದಲು ಹಾಗೂ ಬರೆಯಲು ಬರುವವರು ಮೀಸಲಾತಿಗೆ ಅರ್ಹರು. ಅಭ್ಯರ್ಥಿಗಳು ಕನ್ನಡವನ್ನು ಒಂದು ಭಾಷೆಯಾಗಿ ಹೊಂದಿರುವ ಮಾಧ್ಯಮಿಕ ಶಾಲಾ ಪ್ರಮಾಣಪತ್ರವನ್ನು ಹೊಂದಿಲ್ಲದಿದ್ದರೆ, ಅವರು ‘ನೋಡಲ್ ಏಜೆನ್ಸಿ’ ನಿರ್ದಿಷ್ಟಪಡಿಸಿದ ಕನ್ನಡ ಪ್ರಾವೀಣ್ಯತೆಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

 

WhatsApp Group Join Now
Telegram Group Join Now
Share This Article