‘ಡಬಲ್ ಇಸ್ಮಾರ್ಟ್’ ಸಿನಿಮಾದ ಸ್ಟೆಪ್ಪಮಾರ್ ಹಾಡಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ಮಾರ್ ಮುಂತಾ ಚೋಡ್ ಚಿಂತಾ ಎಂಬ ಗಾನಬಜಾನಕ್ಕೆ ನಾಯಕ ಉಸ್ತಾದ್ ರಾಮ್ ಪೋತಿನೇನಿ ಹಾಗೂ ನಾಯಕಿ ಕಾವ್ಯಾ ಥಾಪರ್ ಸಖತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.
ಕಾಸರ್ಲ ಶ್ಯಾಮ್ ಸಾಹಿತ್ಯದ ದೇಸಿ ನಂಬರ್ ಗೆ ಮಣಿ ಶರ್ಮಾ ಟ್ಯೂನ್ ಹಾಕಿದ್ದು, ರಾಹುಲ್ ಸಿಪ್ಲಿಗುಂಜ್ ಮತ್ತು ಕೀರ್ತನಾ ಶರ್ಮಾ ಧ್ವನಿಯಾಗಿದ್ದಾರೆ. ಮಾರ್ ಮುಂತಾ ಚೋಡ್ ಚಿಂತಾ ಲಿರಿಕಲ್ ವಿಡಿಯೋದ ಜೊತೆಗೆ ಮೇಕಿಂಗ್ ವಿಡಿಯೋ ಕೂಡ ಇರೋದು ವಿಶೇಷವಾಗಿದೆ.
‘ಇಸ್ಮಾರ್ಟ್ ಶಂಕರ್’ ಸಿನಿಮಾದ ಮುಂದುವರೆದ ಭಾಗವೇ ಈ ‘ಡಬಲ್ ಇಸ್ಮಾರ್ಟ್’ ಚಿತ್ರ. ಈ ಮೂಲಕ ಡೈರೆಕ್ಟರ್ ಪೂರಿ ಜಗನ್ನಾಥ್ ಹೊಸ ರೀತಿಯಲ್ಲಿಯೆ ಶಂಕರ್ನ ಕಥೆ ಹೇಳಲು ಹೊರಟ್ಟಿದ್ದಾರೆ. 2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. 5 ವರ್ಷದ ಬಳಿಕ ಪಾರ್ಟ್-2 ‘ಡಬಲ್ ಇಸ್ಮಾರ್ಟ್’ ಸಿನಿಮಾ ಬರುತ್ತಿದೆ. ಟಾಲಿವುಡ್ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.
ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್ ಇಸ್ಮಾರ್ಟ್’ ಸಿನಿಮಾ ಬಿಡುಗಡೆಯಾಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಪುರಿ ಕನೆಕ್ಟ್ಸ್’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಾಮ್ ಪೊತೀನೇನಿಗೆ ನಟಿ ಕಾವ್ಯಾ ಥಾಪರ್ ಜೋಡಿ ಆಗಿದ್ದಾದೆ. ಸಂಜಯ್ ದತ್ ಈ ಸಿನಿಮಾದಲ್ಲಿ ಖಡಕ್ ವಿಲನ್ ಆಗಿಯೇ ಕಾಣಿಸುತ್ತಿದ್ದಾರೆ.
ಭರದಿಂದಲೇ ಚಿತ್ರೀಕರಣ ನಡೆಯುತ್ತಿರೋ ಈ ಸಿನಿಮಾ ರಿಲೀಸ್ ಡೇಟ್ ಕೂಡ ಫಿಕ್ಸ್ ಆಗಿದೆ. ಆಗಸ್ಟ್-15 ರಂದು ಚಿತ್ರ ಎಲ್ಲೆಡೆ ರಿಲೀಸ್ ಮಾಡಲಾಗುತ್ತಿದೆ. ವಿಶ್ವದಾದ್ಯಂತ ಈ ಚಿತ್ರದ ಪ್ರಚಾರ ಕೂಡ ಈಗಾಗಲೇ ಶುರುವಾಗಿದೆ.