ಆರ್​​ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

Ravi Talawar
ಆರ್​​ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ
WhatsApp Group Join Now
Telegram Group Join Now

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮುಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್​​ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು! ಸತ್ಯಶೋಧನೆಯಲ್ಲಿ ನಿರತರಾದ ಆರ್​​ಟಿಐ ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮುಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್​​ಟಿಐ ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ ಮಾಡಿಕೊಂಡಿದೆ. ಆರೋಪಿತ ಸ್ಥಾನದಲ್ಲಿರುವ ಸಿಎಂ ಪರಿವಾರವನ್ನು ರಕ್ಷಿಸುವ ಏಕೈಕ ದುರುದ್ದೇಶದಿಂದ ಕಾಂಗ್ರೆಸ್ಸಿಗರು ಆರ್​ಟಿಐ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂಬಳಕಾಯಿ ಕಳ್ಳ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ಈ ನಾಟಕ ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದ್ದಾರೆ.

ಪೊಲೀಸ್ ಬಲ ಬಳಸಿ ಸತ್ಯದ ಕತ್ತು ಹಿಚುಕಲು ಸಾಧ್ಯವೇ ಇಲ್ಲ. ಹಾದಿಬೀದಿಯಲ್ಲಿ ಜನರ ಕೈಗೆ ಸಿಕ್ಕಿರುವ ದಾಖಲೆಗಳೇ ಮುಡಾ ಹಗರಣದ ‘ಅಸಲಿ ಕೈ’ ಯಾವುದು ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತಿವೆ. ಹಾಗಿದ್ದ ಮೇಲೆ ಸತ್ಯವನ್ನು ಹೆಕ್ಕಿ ತೆಗೆದ ಆರ್​​ಟಿಐ ಕಾರ್ಯಕರ್ತರ ಮೇಲೆ ರಾಜ್ಯ ಕಾಂಗ್ರೆಸ್ ಪಕ್ಷ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

WhatsApp Group Join Now
Telegram Group Join Now
Share This Article