ನವದೆಹಲಿ: ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ದಿನೇದಿನೆ ಹದಗೆಡುತ್ತಿದೆ, ಅವರಿಗೆ ಜೈಲಿನಲ್ಲಿ ಸರಿಯಾದ ಆಹಾರ ನೀಡುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷ ಆರೋಪಿಸುತ್ತಲೇ ಇದೆ. ಆದರೆ, ಈ ಕುರಿತು ಪತ್ರ ಬರೆದಿರುವ ದೆಹಲಿ ಲೆಫ್ಟಿನೆಂಟ್ ಜನರಲ್ ವಿಕೆ ಸಕ್ಸೇನಾ, ಅರವಿಂದ್ ಕೇಜ್ರಿವಾಲ್ ಅವರಿಗೆ ಮನೆಯಲ್ಲೇ ತಯಾರಿಸಿದ ಉತ್ತಮ ಗುಣಮಟ್ಟದ ಆಹಾರವನ್ನೇ ನೀಡಲಾಗುತ್ತಿದೆ. ಆದರೂ ಅವರು ಉದ್ದೇಶಪೂರ್ವಕವಾಗಿಯೇ ಕಡಿಮೆ ಕ್ಯಾಲೊರಿ ಇರುವ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ದೆಹಲಿ ಎಲ್ಜಿ ಮತ್ತು ಎಎಪಿ ಸರ್ಕಾರದ ನಡುವಿನ ಮತ್ತೊಂದು ಸುತ್ತಿನ ಜಗಳದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಶಿಫಾರಸು ಮಾಡದ ವೈದ್ಯಕೀಯ ಆಹಾರ ಮತ್ತು ಔಷಧಗಳ ಸೇವನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ಎಲ್ಜಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಅವರು ದೆಹಲಿ ಮುಖ್ಯಮಂತ್ರಿಯ ಆರೋಗ್ಯ ಹದಗೆಡುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ಹೇಳಿಕೆಗಳನ್ನು ನಿರಾಕರಿಸಿದ್ದಾರೆ.
“ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲೋರಿ ಸೇವನೆಯನ್ನು ಮಾಡುತ್ತಿದ್ದಾರೆ ಎಂಬುದಕ್ಕೆ ಹಲವಾರು ನಿದರ್ಶನಗಳಿವೆ. ಅವರಿಗೆ ಮನೆಯಲ್ಲಿ ತಯಾರಿಸಿದ ಸಾಕಷ್ಟು ಆಹಾರವನ್ನು ಒದಗಿಸಲಾಗಿದೆ. ಸಿಎಂ ಕೇಜ್ರಿವಾಲ್ ನಿಗದಿತ ಆಹಾರವನ್ನು ಸೇವಿಸಿಲ್ಲ. ಕಡಿಮೆ ಕ್ಯಾಲೋರಿ ಸೇವನೆಯಿಂದ ಬಹಳ ತೂಕ ಕಡಿಮೆಯಾಗಿದೆ” ಎನ್ನಲಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಡುವ ಮೂಲಕ ಅವರ ಆರೋಗ್ಯಕ್ಕೆ ಹಾನಿ ಮಾಡಲು ಬಿಜೆಪಿ ಪಿತೂರಿ ನಡೆಸುತ್ತಿದೆ ಮತ್ತು ಮಧುಮೇಹಿಯಾಗಿರುವ ಅವರಿಗೆ ವೈದ್ಯಕೀಯ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿರುವ ಎಲ್ಜಿಗೆ ಎಎಪಿ ನಾಯಕ ಸಂಜಯ್ ಸಿಂಗ್ ತಿರುಗೇಟು ನೀಡಿದ್ದಾರೆ. “ಎಲ್ಜಿ ಸರ್ ನೀವು ಯಾವ ರೀತಿಯ ತಮಾಷೆ ಮಾಡುತ್ತಿದ್ದೀರಿ? ಮನುಷ್ಯರಿಗೆ ರಾತ್ರಿಯಲ್ಲಿ ಮಾತ್ರ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ ಎಂದರೆ ಇದು ತುಂಬಾ ಅಪಾಯಕಾರಿ ಎಂದಿದ್ದಾರೆ.