ಖ್ಯಾತ ಜನಪದ ಗಾಯಕ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ ನಿಧನ

Ravi Talawar
ಖ್ಯಾತ ಜನಪದ ಗಾಯಕ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ ನಿಧನ
WhatsApp Group Join Now
Telegram Group Join Now

ಬೆಂಗಳೂರು, ಜುಲೈ.23: ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ(74) ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಾಗಪ್ಪ (Alur Nagappa) ಅವರು ಅನಾರೋಗ್ಯದಿಂದಾಗಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಹುಟ್ಟೂರು ಬಿಡದಿಯಲ್ಲಿ ಆಲೂರು ನಾಗಪ್ಪ ಅಂತ್ಯಕ್ರಿಯೆ ನಡೆಯಲಿದೆ.

ನಿಂಗವ್ವ ಬೆಂಗಳೂರಿಗೆ ಬಂದು ನೋಡವ್ವ ಹಾಡಿನ ಖ್ಯಾತಿಯ ಆಲೂರು ನಾಗಪ್ಪ ಅವರು ಸಾವಿರಾರು ಲಾವಣಿ, ತತ್ವಪದಗಳ ಹರಿಕಾರಕ. ಇವರು ರಚಿಸಿ, ಹಾಡಿರುವ ಹಾಡುಗಳು ಇಂದಿಗೂ ಜನಪ್ರಿಯತೆ ಕಳೆದುಕೊಂಡಿಲ್ಲ. ಇವರಿಗೆ ಜಾನಪದ ಸಂಗೀತದ ಮೇಲಿದ್ದ ಪ್ರೀತಿ ಎಂತಹದ್ದು ಎಂದರೆ ಇವರು ಹೆಡ್‌ ಕಾನ್‌ಸ್ಟೇಬಲ್‌ ಹುದ್ದೆಗೆ ರಿಸೈನ್‌ ಮಾಡಿ ತಮ್ಮ ಆಸಕ್ತಿಗೆ ಒತ್ತು ನೀಡಿದ್ದರು.

ಆಲೂರು ನಾಗಪ್ಪ, ಗಾಯಕರಾಗಿ ಮಾತ್ರವಲ್ಲ, ಕನ್ನಡಪರ ಹೋರಾಟಗಾರರಾಗಿ ಕೂಡಾ ಗುರುತಿಸಿಕೊಂಡಿದ್ದಾರೆ. ಇನ್ನು ಇವರ ಮಗಳು ದಿವ್ಯ ಅಲೂಕು ಕೂಡ ನಿರೂಪಕಿ, ಗಾಯಕಿಯಾಗಿದ್ದಾರೆ.

 

WhatsApp Group Join Now
Telegram Group Join Now
Share This Article