ಬೆಳಗಾವಿ.ಭಾರೀ ನಿರೀಕ್ಷೆಯ ಮೋದಿ ಸರ್ಕಾರ 3.0 ಅವಧಿಯ ಮೊದಲ ಬಜೆಟ್ ಮಂಡನೆಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ.
ಈ ಬಜೆಟ್ ಸಮಾಜದ ಪ್ರತಿಯೊಂದು ವರ್ಗವನ್ನು ಬಲಪಡಿಸುವ ಬಜೆಟ್ ಆಗಿದ್ದು. ಇದು ದೇಶದ ಬಡವರು, ಹಳ್ಳಿಗಳು ಮತ್ತು ರೈತರನ್ನು ಸಮೃದ್ಧಿಯ ಹಾದಿಯಲ್ಲಿ ಕೊಂಡೊಯ್ಯುವ ಬಜೆಟ್ ಆಗಿದೆ. ನಗರ ಅಭಿವೃದ್ಧಿ, ಇಂಧನ ಸೌಕರ್ಯ ಸೇರಿದಂತೆ ಮೂಲಭೂತ ಸೌಕರ್ಯಗಳಿಗೂ ಪ್ರತ್ಯೇಕ ಗಮನ ನೀಡಲಾಗಿದೆ.
ಕೌಶಲ್ಯ, ಮಧ್ಯಮವರ್ಗ, ನಿರುದ್ಯೋಗ, ಎಮ್ ಎಸ್ ಎಮ್ ಇ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ ಎಂದು *ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ* ಪ್ರಕಟಣೆಯಲ್ಲಿ ತಿಳಿಸಿದ್ದಾರೆ.