ಬೆಂಗಳೂರು: ಮುಡಾ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲವೆಂದು ವಿರೋದ ಪಕ್ಷದವರು ಅಹೋರಾತ್ರಿ ಧರಣಿ ನಡೆಸಿರುವುದು ರಾಜಕೀಯ ನಾಟಕವಷ್ಟೇ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಪರ್ಯಾಯ ನಿವೇಶನ (ಪ್ಲಾಟ್) ಹಗರಣ ವಿಚಾರವನ್ನು ಚರ್ಚೆಗೆ ಏಕೆ ಕೈಗೆತ್ತಿಕೊಳ್ಳಲಾಗುತ್ತಿಲ್ಲ ಎಂಬುದನ್ನು ವಿವರಿಸಿದರೂ ಬಿಜೆಪಿಯು ನಡೆಯುತ್ತಿರುವ ವಿಧಾನಮಂಡಲ ಅಧಿವೇಶನವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದರು.
ಮುಡಾದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ತಮ್ಮ ವಿರುದ್ಧದ ಆರೋಪಗಳ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ತನಿಖೆಗೆ ಆಯೋಗ ರಚಿಸಿದ್ದಾರೆ. ಮುಖ್ಯಮಂತ್ರಿಯೊಬ್ಬರು ತಮ್ಮ ವಿರುದ್ಧ ಆರೋಪ ಬಂದಾಗ ಈ ರೀತಿ ತನಿಖಾ ಆಯೋಗ ರಚಿಸಿದ ಉದಾಹರಣೆ ಇದೆಯೇ? ಪ್ರಶ್ನಿಸಿದರು.