ವಿದ್ಯುನ್ಮಾನ ಮತ ಯಂತ್ರ ಹಾಗೂ ವಿವಿ ಪ್ಯಾಟ್ ತಾಳೆ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ವಿವಿ ಪ್ಯಾಟ್ ವ್ಯವಸ್ಥೆಯಲ್ಲಿ ಸೃಷ್ಟಿಯಾಗುವ ಪೇಪರ್ ಸ್ಲಿಪ್‌ಗಳ ಜತೆಗೆ ಇವಿಎಂನಲ್ಲಿ ಚಲಾವಣೆಗೊಂಡ ಪ್ರತಿಯೊಂದು ಮತವನ್ನೂ ತಾಳೆ ಹಾಕಿ ಪರಿಶೀಲಿಸುವಂತೆ ಆದೇಶ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು.
ಏಪ್ರಿಲ್ 26ರಂದು ಸಂಜೀವ್ ಕುಮಾರ್ ಹಾಗೂ ದೀಪಾಂಕರ್ ದತ್ತ ಅವರು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಏಪ್ರಿಲ್ 26ರ ತೀರ್ಪಿನಲ್ಲಿ ಕೆಲವು ತಪ್ಪುಗಳಿದ್ದವು ಎಂದು ಆರೋಪಿಸಿ ಅರುಣ್ ಕುಮಾರ್ ಅಗರ್ವಾಲ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಏಪ್ರಿಲ್ 26 ರಂದು ಎಲ್ಲಾ ವಿವಿಪ್ಯಾಟ್ ಚೀಟಿಗಳನ್ನು ಇವಿಎಂಗಳ ಮೂಲಕ ಚಲಾವಣೆಯಾದ ಮತಗಳೊಂದಿಗೆ ತಾಳೆ ಮಾಡಿ ಇವಿಎಂ ಮತಗಳ ವಿಶ್ವಾಸಾರ್ಹತೆ ಹೆಚ್ಚಿಸಬೇಕು ಎಂದು ಕೋರಿದ್ದ ಮನವಿಯನ್ನು ವಜಾಗೊಳಿಸಿತ್ತು. ಇವಿಎಂಗಳ ಬದಲಿಗೆ ಮತಪತ್ರಗಳ ಮೂಲಕ ಚುನಾವಣೆ ನಡೆಸುವ ಹಳೆಯ ವಿಧಾನಕ್ಕೆ (ಪೇಪರ್ ಬ್ಯಾಲಟ್) ಹಿಂತಿರುಗಲು ಕೋರಿದ್ದ ಅರ್ಜಿದಾರರ ಮನವಿಯನ್ನೂ ಅದು ತಿರಸ್ಕರಿಸಿತ್ತು.
ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳೊಂದಿಗೆ ಎಲ್ಲಾ ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಚೀಟಿಗಳನ್ನು ತಾಳೆ ಮಾಡಲು ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಏಪ್ರಿಲ್ನಲ್ಲಿ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.