ಕರ್ನಾಟಕದಲ್ಲಿ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ

Ravi Talawar
ಕರ್ನಾಟಕದಲ್ಲಿ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ
WhatsApp Group Join Now
Telegram Group Join Now
ಬೆಳಗಾವಿ: ಕರ್ನಾಟಕ ರಾಜಕಾರಣಲ್ಲಿ ದಿನದಿಂದ ದಿನಕ್ಕೆ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ. ಬಿಜೆಪಿಯ ಕೆಲ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ತಂದಿಡುವುದೇ ಕೆಲಸವಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.
ಸವದತ್ತಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯಾಧ್ಯಕ್ಷರಿಂದ ಒಳ ಒಪ್ಪಂದದ ರಾಜಕೀಯ ನಡೆಯುತ್ತಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಯತ್ನಾಳ್ ಅವರ ಬಗ್ಗೆ ಅಪಾರ ಗೌರವಿದೆ. ಅವರಿಗೆ ಇಂತಹ ಹೇಳಿಕೆಗಳು ಶೋಭೆ ತರುವುದಿಲ್ಲ ಎಂದು ಹೇಳಿದರು.
ಶಾಸಕ ಯತ್ನಾಳ್ ಅವರು, ಬೇಕಿದ್ದರೆ ತಮ್ಮ ಪಕ್ಷದ ಬಗ್ಗೆ ಮಾತಾಡಲಿ, ಇನ್ನೊಂದು ಪಕ್ಷದ ಬಗ್ಗೆ ಮಾತನಾಡುವುದು ಬೇಡ. ಅವರಿಗೆ ಗೊಂದಲ‌ ಸೃಷ್ಟಿಸುವುದೇ ಕೆಲಸ. ಅನಾವಶ್ಯಕ ಹೇಳಿಕೆಗಳಿಂದ ಗೊಂದಲ‌ ಸೃಷ್ಟಿ ಮಾಡಿ , ಸಿಎಂ, ಡಿಸಿಎಂ ನಡುವೆ ತಂದಿಡುವ ಕೆಲಸವನ್ನು ಮೊದಲು ಬಿಡಲಿ ಎಂದು ಸಚಿವರು ತಿರುಗೇಟು ನೀಡಿದರು.
ಸಿಎಂ, ಡಿಸಿಎಂ ಇಬ್ಬರೂ ಮುತ್ಸದ್ದಿ ರಾಜಕಾರಣಿಗಳು. ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಮಾಡುವುದು ಪಕ್ಷದ ಶಾಸಕರು ಹಾಗೂ ಹೈಕಮಾಂಡೇ ಹೊರತು ಬಿಜೆಪಿ ರಾಜ್ಯಾಧ್ಯಕ್ಷರಲ್ಲ. ಒಳ ಒಪ್ಪಂದ ರಾಜಕಾರಣದ ಮಾತನ್ನು ಇನ್ಮುಂದಾದರೂ ಯತ್ನಾಳ್ ನಿಲ್ಲಿಸಲಿ ಎಂದು ಹೇಳಿದರು. ‌
ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಪದೆ ಪದೇ ಅನ್ಯಾಯ ಆಗುತ್ತಿದೆ.  ಮೊದಲು ಅದನ್ನು ಸರಿ ಪಡಿಸಲಿ. ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರು ಮಾತನಾಡಲಿ. ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
WhatsApp Group Join Now
Telegram Group Join Now
Share This Article