ಶಿಮ್ಲಾ ಮೇಘಸ್ಫೋಟದಲ್ಲಿ 30 ಕ್ಕೂ ಹೆಚ್ಚು ಜನರು ನಾಪತ್ತೆ!

Ravi Talawar
ಶಿಮ್ಲಾ ಮೇಘಸ್ಫೋಟದಲ್ಲಿ 30 ಕ್ಕೂ ಹೆಚ್ಚು ಜನರು ನಾಪತ್ತೆ!
WhatsApp Group Join Now
Telegram Group Join Now

ಶಿಮ್ಲಾ: ಕೇರಳದ ವಯನಾಡ್ ನಂತರ ಇಂದು ಗುರುವಾರ ಮುಂಜಾನೆ ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರಾಂಪುರ ಉಪವಿಭಾಗದ ಝಖಾರಿ ಪ್ರದೇಶದಲ್ಲಿ ಪ್ರಾಕೃತಿಕ ವಿಕೋಪ ಉಂಟಾಗಿದೆ. ಮೇಘಸ್ಫೋಟದಲ್ಲಿ 30 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಸ್ತೆಗಳು ಕೊಚ್ಚಿಹೋಗಿವೆ. ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್, ಪೊಲೀಸರು ಮತ್ತು ಗೃಹರಕ್ಷಕ ದಳದ ತಂಡಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ನಾಪತ್ತೆಯಾದವರ ಪತ್ತೆಗೆ ಡ್ರೋನ್‌ಗಳನ್ನು ಸಹ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.

ಕುಲುವಿನಲ್ಲಿ ಗುರುವಾರ ಬೆಳಗ್ಗೆ ಕಟ್ಟಡವೊಂದು ಕುಸಿದು ಪಾರ್ವತಿ ನದಿಯಲ್ಲಿ ಮುಳುಗಿದ್ದರೆ, ಮನಾಲಿಯಲ್ಲಿ ನಿರಂತರ ಮಳೆಯಿಂದಾಗಿ ಬಿಯಾಸ್ ನದಿ ನೀರಿನ ಮಟ್ಟ ಏರಿಕೆಯಾಗಿದೆ.

 

WhatsApp Group Join Now
Telegram Group Join Now
Share This Article