ಮಳೆಯಿಂದಾಗಿ ಅನಧಿಕೃತ ಮನೆಗಳು‌ ಬಿದ್ದರೂ 1.25 ಲಕ್ಷ ರೂ. ಪರಿಹಾರ: ಸಚಿವ ಮಧು ಬಂಗಾರಪ್ಪ

Ravi Talawar
ಮಳೆಯಿಂದಾಗಿ ಅನಧಿಕೃತ ಮನೆಗಳು‌ ಬಿದ್ದರೂ 1.25 ಲಕ್ಷ ರೂ. ಪರಿಹಾರ: ಸಚಿವ ಮಧು ಬಂಗಾರಪ್ಪ
WhatsApp Group Join Now
Telegram Group Join Now

ಶಿವಮೊಗ್ಗ, ಆಗಸ್ಟ್ 3: ಮಳೆಯಿಂದಾಗಿ ಅನಧಿಕೃತ ಮನೆಗಳು‌ ಬಿದ್ದರೂ 1.25 ಲಕ್ಷ ರೂ. ಪರಿಹಾರ ಕೊಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಳೆದ ಬಾರಿ 5 ಲಕ್ಷ ರೂ. ಪರಿಹಾರ ಕೊಡುತ್ತಾರೆ ಅಂತಾ ಅವರೇ ಮನೆ ಕೆಡವಿಕೊಂಡರು. ಕಳೆದ ಬಾರಿ ಪ್ರಭಾವ ಇದ್ದವರು 5 ಲಕ್ಷ ರೂ. ಪಡೆದಿದ್ದರು. ಇನ್ನುಳಿದವರು 1 ಲಕ್ಷ ರೂ. ಪಡೆದಿದ್ದರು. ಆದರೆ ಈ ಬಾರಿ ಮನೆ ಬಿದ್ದವರಿಗೆ ಪೂರ್ತಿ ಮನೆ ಕಟ್ಟಿ ಕೊಡುವ ಕೆಲಸ ಮಾಡುತ್ತೇವೆ ಎಂದರು.

ಮುಡಾ ಹಗರಣ ಆರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಬಹಳ ಹಗುರವಾಗಿ ಮಾತನಾಡುತ್ತಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಅವರ ಪಕ್ಷದವರೇ. ವಿಜಯೇಂದ್ರ ಬಗ್ಗೆ ಯತ್ನಾಳ್ ಮಾತನಾಡ್ತಿದ್ದಾರೆ. ಅದರ ಬಗ್ಗೆ ಪ್ರತಿಕ್ರಿಯಿಸಲ್ಲ. ಡಿಕೆ ಶಿವಕುಮಾರ್ ಬಗ್ಗೆ ಮಾತನಾಡಲು ಏನು ಯೋಗ್ಯತೆ ಇದೆ? ವಿಜಯೇಂದ್ರ ಎಲ್ಲಿದ್ದರು, ಇವರು ಏನು ಕೆಲಸ ಮಾಡ್ತಿದ್ದರು? ವಿಜಯೇಂದ್ರ ಆಸ್ತಿ ಎಷ್ಟು, ಅವರ ಆಸ್ತಿ ಹೇಗೆ ಬಂತು ಹೇಳಬೇಕಲ್ಲ. ವಿಜಯೇಂದ್ರ ಮೇಲೂ ಕೇಸ್ ಇದೆ. ಬಡಾ ಸೈನ್, ಚೋಟಾ ಸೈನ್, ಮನಿ ಲ್ಯಾಂಡರಿಂಗ್ ಮಾಡಿದ್ದಾರೆ ಎಂದು ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Share This Article