ಶೇಖ್ ಹಸೀನಾ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸರ್ವಪಕ್ಷಗಳ ಸಭೆ

Ravi Talawar
ಶೇಖ್ ಹಸೀನಾ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸರ್ವಪಕ್ಷಗಳ ಸಭೆ
WhatsApp Group Join Now
Telegram Group Join Now

ಬಾಂಗ್ಲಾದೇಶದಲ್ಲಿ ಉದ್ಭವಿಸಿರುವ ಅಶಾಂತಿ ಹಾಗೂ ಭಾರತಕ್ಕೆ ಬಂದು ಆಶ್ರಯ ಪಡೆದಿರುವ ಪ್ರಧಾನಿ ಶೇಖ್ ಹಸೀನಾ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸರ್ವಪಕ್ಷಗಳ ಸಭೆ ಕರೆದಿದ್ದರು. ಶೇಖ್​ ಹಸೀನಾ ಮೊದಲು ಚೇತರಿಸಿಕೊಳ್ಳಲಿ ಒಂದೆಡೆ ನೆಲೆಯೂರಲಿ ಬಳಿಕ ಈ ವಿಚಾರದ ಕುರಿತು ಅವರ ಬಳಿ ಮಾತನಾಡೋಣ ಎಂದು ಜೈಶಂಕರ್ ಹೇಳಿದ್ದಾರೆ.

ಕೆಲವು ದೇವಾಲಯಗಳ ಮೇಲೆ ದಾಳಿಗಳು ನಡೆದಿರುವುದರಿಂದ ಸರ್ಕಾರವು ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿದರು. ಸರ್ಕಾರ ಕಾದು ನೋಡುವ ಕ್ರಮದಲ್ಲಿದೆ, ಆದರೆ ಬಾಂಗ್ಲಾದೇಶದ ಸೇನೆಯೊಂದಿಗೆ ಸಂಪರ್ಕದಲ್ಲಿದೆ. ಶೇಖ್ ಹಸೀನಾ ಭಾರತಕ್ಕೆ ಬಂದಿರುವ ವಿಚಾರವನ್ನು ವಿದೇಶಾಂಗ ವ್ಯಹಾರಗಳ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಬಾಂಗ್ಲಾದೇಶದಲ್ಲಿರುವ ರಾಯಭಾರಿ ಅಧಿಕಾರಿಗಳು ಮತ್ತು ಭಾರತೀಯ ಪ್ರಜೆಗಳ ಸುರಕ್ಷತೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಸಚಿವರು ಹೇಳಿದರು. ಆದರೆ, ಪರಿಸ್ಥಿತಿಯು ಸ್ಥಳಾಂತರಿಸುವಷ್ಟು ಕೆಟ್ಟದ್ದಲ್ಲ ಆದರೆ ಎಚ್ಚರಿಕೆಯನ್ನು ತೆಗೆದುಕೊಳ್ಳುವಷ್ಟು ಆತಂಕಕಾರಿಯಾಗಿದೆ ಎಂದು ಅವರು ಹೇಳಿದರು. ಬಾಂಗ್ಲಾದೇಶದಲ್ಲಿ ಕನಿಷ್ಠ 20 ಸಾವಿರ ಮಂದಿ ಭಾರತೀಯರಿದ್ದಾರೆ. ಅವರಲ್ಲಿ 8 ಸಾವಿರ ಮಂದಿ ಹಿಂದಿರುಗಿದ್ದಾರೆ.

ಉದ್ಯೋಗ ಕೋಟಾ ಮರುಜಾರಿ ಕುರಿತು ಪ್ರತಿಭಟನೆ ಶುರುವಾಗಿತ್ತು. ಉದ್ಯೋಗ ಕೋಟಾ ಮರುಜಾರಿ ಆದೇಶವನ್ನು ಉನ್ನತ ನ್ಯಾಯಾಲಯ ಈಗಾಗಲೇ ಹಿಂಪಡೆದಿದೆ. ಉದ್ಯೋಗ ಕೋಟಾ ಮರುಜಾರಿ ಆದೇಶವನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು.

ಪೊಲೀಸರು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ನಡುವೆ ರಾಷ್ಟ್ರವ್ಯಾಪಿ ನಡೆದ ಘರ್ಷಣೆಯಲ್ಲಿ 151ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಲಭೆಯನ್ನು ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗದಿದ್ದಾಗ ಸೈನಿಕರು ಬಾಂಗ್ಲಾದೇಶದಾದ್ಯಂತ ನಗರಗಳಲ್ಲಿ ಗಸ್ತು ತಿರುಗಿದರು. ರಾಷ್ಟ್ರವ್ಯಾಪಿ ಇಂಟರ್ನೆಟ್ ಬಂದ್​ ಮಾಡಲಾಗಿತ್ತು.

WhatsApp Group Join Now
Telegram Group Join Now
Share This Article