ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕೇಜ್ರಿವಾಲ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ತುರ್ತು ಪಟ್ಟಿಗಾಗಿ ವಿಷಯವನ್ನು ಪ್ರಸ್ತಾಪಿಸಿದರು. ಇ-ಮೇಲ್ ವಿನಂತಿಯನ್ನು ಪರಿಶೀಲಿಸಿ ದಿನಾಂಕವನ್ನು ನಿಗದಿಪಡಿಸುವುದಾಗಿ ಸಿಜೆಐ ಹೇಳಿದರು.
ಆಗಸ್ಟ್ 5ರ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಸಿಬಿಐ ಬಂಧನದ ವಿರುದ್ಧದ ಅವರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತು ಮತ್ತು ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಅವರಿಗೆ ಸ್ವಾತಂತ್ರ್ಯ ನೀಡಿದೆ.
ಇ.ಡಿಯಿಂದ ಕೇಜ್ರಿವಾಲ್ ಅವರನ್ನು ಬಂಧಿಸಿಲಾಯಿತು. ಮಾರ್ಚ್ 21ರಿಂದ ಬಂಧನದಲ್ಲಿದ್ದಾರೆ. ಅವರು ಮೇ ತಿಂಗಳಲ್ಲಿ 21 ದಿನಗಳ ಮಧ್ಯಂತರ ಜಾಮೀನನ್ನು ಪಡೆದುಕೊಂಡರು. ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಮಂಜೂರು ಮಾಡಿತ್ತು. ಜುಲೈ 12 ರಂದು, ಇಡಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಅವರು 90 ದಿನಗಳ ಕಾಲ ಜೈಲಿನಲ್ಲಿ ಕಳೆದಿದ್ದಾರೆ ಎಂದು ಒಪ್ಪಿಕೊಂಡರು. ಆದರೂ, ಇದೇ ಪ್ರಕರಣದಲ್ಲಿ ಜೂನ್ 26 ರಂದು ಸಿಬಿಐನಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.