ಪ್ರಾಸಿಕ್ಯೂಷನ್ ಅನುಮತಿ ರಾಜಕೀಯ ಷಡ್ಯಂತ್ರ; ರಾಜ್ಯಪಾಲರ ನಡೆಗೆ ಸಿದ್ದರಾಮಯ್ಯ ಸಂಪುಟ ಆಕ್ಷೇಪ

Ravi Talawar
ಪ್ರಾಸಿಕ್ಯೂಷನ್ ಅನುಮತಿ ರಾಜಕೀಯ ಷಡ್ಯಂತ್ರ; ರಾಜ್ಯಪಾಲರ ನಡೆಗೆ ಸಿದ್ದರಾಮಯ್ಯ ಸಂಪುಟ ಆಕ್ಷೇಪ
WhatsApp Group Join Now
Telegram Group Join Now

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ರಾಜ್ಯಪಾಲರ ನಡೆಗೆ ಸಿದ್ದರಾಮಯ್ಯ ಸಂಪುಟದ ಸಚಿವರು ಸೇರಿದಂತೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೃಹ ಸಚಿವ ಡಾ ಜಿ ಪರಮೇಶ್ವರ, ಯಾವ ರೀತಿಯಲ್ಲಿ ಗವರ್ನರ್​ ‌ಅನುಮತಿ ಕೊಟ್ಟಿದ್ದಾರೆಂದು ಗೊತ್ತಿಲ್ಲ. ಕಾನೂನು ಹೋರಾಟ ಮಾಡುತ್ತೇವೆ. ಕೇಂದ್ರದಿಂದ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಒತ್ತಡ ಇರುವುದು ಸ್ಪಷ್ಟವಾಗುತ್ತಿದೆ. ರಾಜ್ಯಪಾಲರ ಭವನ ರಾಜಕೀಯ ನಿವಾಸವಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ಮೌಖಿಕವಾಗಿ, ಪತ್ರ ವ್ಯವಹಾರ ಮಾಡಿಲ್ಲ. ಈ ಬಗ್ಗೆ ‌ನಾವು ರಾಜ್ಯಪಾಲರಿಗೆ ಉತ್ತರ ಕೊಟ್ಟಿದ್ದೆವು. ನಾವು ಶೋಕಾಸ್ ನೋಟಿಸ್​ಗೆ ಎಳೆ ಎಳೆಯಾಗಿ ಉತ್ತರ ಕೊಟ್ಟಿದ್ದೆವು. ಆದರೂ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ಕಚೇರಿ ದುರ್ಬಳಕೆ ಆಗಿದೆ ಎಂದು ಆರೋಪಿಸಿದ್ದಾರೆ.

 ನಮಗೆ ಕಾನೂನು ಹೋರಾಟ ಅನಿವಾರ್ಯವಾಗಿದೆ. ಮುಂದಿನ ಕಾನೂನು ರೂಪುರೋಷಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿರುವ ಗೃಹ ಸಚಿವರು ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ.

ಶೋಕಾಸ್​ ನೋಟಿಸ್​ ಕೊಟ್ಟಾಗಲೇ ಇದು ಷಡ್ಯಂತ್ರ ಎಂಬುದು ಗೊತ್ತಾಯ್ತು. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಬೇಕೆಂದು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿಯವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲ. ಬಿಜೆಪಿಯವರು ಸಂವಿಧಾನ ಬಾಹಿರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಎಂದು ದೆಹಲಿಯಲ್ಲಿ ಕಾಂಗ್ರೆಸ್ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್​ ವಾಗ್ದಾಳಿ ನಡೆಸಿದ್ದಾರೆ. ಸೈಟ್ ಹಂಚಿಕೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಆಗಿದ್ದಲ್ಲ. 20 ವರ್ಷಗಳ ಹಿಂದೆ ನಡೆದಿರುವುದು ಎಂದು ಅವರು ಹೇಳಿದ್ದಾರೆ

WhatsApp Group Join Now
Telegram Group Join Now
Share This Article