ರಾಜ್ಯಪಾಲರು ತರಾತುರಿಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

Ravi Talawar
ರಾಜ್ಯಪಾಲರು ತರಾತುರಿಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​​.17: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ  ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್  ಅನುಮತಿಯನ್ನು ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಸುದ್ದಿಗೋಷ್ಠಿ ನಡೆಸಿದ್ದು ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಾಥಮಿಕ ತನಿಖೆ ನಡೆಯದಿದ್ದರೂ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿ ಮಾಡುವ ಕೆಲಸ ಆಗ್ತಿದೆ. ಸಂವಿಧಾನದ ರಕ್ಷಣೆ ಮಾಡುತ್ತೇವೆ. ಗ್ಯಾರಂಟಿ ಯೋಜನೆ ಮೂಲಕ ಬಡವರಿಗೆ ಸಹಾಯ ಮಾಡ್ತಿದ್ದೇವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಪಂಜಾಬ್​ನಲ್ಲೂ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಮಾಡಲಾಗ್ತಿದೆ. ಇಂಡಿಯಾ ಒಕ್ಕೂಟ ಕೂಡ ಸಿಎಂ ಸಿದ್ದರಾಮಯ್ಯ ಪರ ಇದೆ. ನಾನು ಸಿಎಂ ಸಿದ್ದರಾಮಯ್ಯ ಪರ ಇದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ತಿಳಿಸಿದರು.

WhatsApp Group Join Now
Telegram Group Join Now
Share This Article