ಬೆಂಗಳೂರು, : 4 ದಶಕಗಳ ರಾಜಕೀಯ ಜೀವನದಲ್ಲೇ ಸಿದ್ದರಾಮಯ್ಯಗೆ ಅತಿದೊಡ್ಡ ಅಗ್ನಿ ಪರೀಕ್ಷೆ ಎದುರಾಗಿದೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಟಗರು ಎಂದೇ ಖ್ಯಾತರಾರ ಸಿದ್ದರಾಮಯ್ಯ ವಿಚಲಿತಗೊಳ್ಳುವಂತೆ ಮಾಡಿದೆ. ಹೀಗಾಗಿ ಸಂಕಷ್ಟದಿಂದ ಪಾರಾಗಲು ಅವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಭಾನುವಾರ ಕೂಡ ಸಚಿವರು, ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ್ದ ಸಿಎಂ, ಪ್ರಾಸಿಕ್ಯೂಷನ್ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಿದ್ದಾರೆ.
ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ರದ್ದುಪಡಿಸುವಂತೆ ರಿಟ್ ಅರ್ಜಿಯಲ್ಲಿ ಸಿದ್ದರಾಮಯ್ಯ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಕೂಡ ಚಿಂತನೆ ನಡೆದಿತ್ತು. ಈ ಮೂಲಕ ರಾಷ್ಟ್ರಮಟ್ಟದಲ್ಲೂ ರಾಜ್ಯಪಾಲರ ನಡೆ ಪ್ರತಿಧ್ವನಿಸುವಂತೆ ಮಾಡಿದರೆ, ರಾಜಕೀಯವಾಗಿ ಅನುಕೂಲವಾಗುತ್ತದೆಂಬ ಲೆಕ್ಕಾಚಾರವಿತ್ತು. ಆದರೆ, ಸುಪ್ರೀಂ ಮೊರೆ ಹೋದರೆ, ಪ್ರಕರಣ ಹೈಕೋರ್ಟ್ಗೆ ವರ್ಗಾವಣೆಯಾಗಬಹುದು ಎಂದು ವಕೀಲರು ಸಲಹೆ ನೀಡಿದ್ದಾರೆ. ಹೀಗಾಗಿ ಹೈಕೋರ್ಟ್ನಲ್ಲೇ ಇಂದು ರಿಟ್ ಅರ್ಜಿ ಸಲ್ಲಿಸಲಿದ್ದಾರೆ.