ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ 24 ಗಂಟೆ ಭಾರಿ ಮಳೆ

Ravi Talawar
ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ 24 ಗಂಟೆ ಭಾರಿ ಮಳೆ
WhatsApp Group Join Now
Telegram Group Join Now

ಬೆಂಗಳೂರು ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಚಿಕ್ಕಮಗಳೂರು, ಹುಣಸಗಿ, ಮುನಿರಾಬಾದ್, ರಬಕವಿ, ಯಡವಾಡ, ಶಿವಮೊಗ್ಗ, ಕುಶಾಲನಗರ, ಭಾಲ್ಕಿ, ಕವಡಿಮಟ್ಟಿ, ಸೋಮವಾರಪೇಟೆ, ಶೋರಾಪುರ, ಮುದ್ದೇಬಿಹಾಳ, ಗುಂಡ್ಲುಪೇಟೆ, ಲೋಕಾಪುರ, ತ್ಯಾಗರ್ತಿ, ಗುಂಡ್ಲುಪೇಟೆ, ಅಜ್ಜಂಪುರ, ಆಗುಂಬೆ, ಶ್ರವಣಬೆಳಗೊಳ, ಕಮ್ಮರಡಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆ ವೇಳೆಗೆ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

WhatsApp Group Join Now
Telegram Group Join Now
Share This Article