ಸಿಎಂ ವಿರುದ್ಧದ ತನಿಖೆಯಲ್ಲಿ ನಿರ್ಲಕ್ಷ್ಯ: ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ನೋಟಿಸ್ ಜಾರಿ

Ravi Talawar
ಸಿಎಂ ವಿರುದ್ಧದ ತನಿಖೆಯಲ್ಲಿ ನಿರ್ಲಕ್ಷ್ಯ: ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ನೋಟಿಸ್ ಜಾರಿ
WhatsApp Group Join Now
Telegram Group Join Now

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಪ್ರಕರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ.

ಸಿದ್ಧರಾಮಯ್ಯ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಎಡಿಜಿಪಿ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ, ಶೋಕಾಸ್‌‍ ನೋಟೀಸ್‌‍ ಜಾರಿ ಮಾಡಿದೆ.

ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಅತ್ಯಂತ ಆಪ್ತ ಸ್ನೇಹಿತ ವಿವೇಕಾನಂದ (ಕಿಂಗ್ಸ್ ಕೋರ್ಟ್‌ ವಿವೇಕ್‌) ಅವರಿಂದ ಒಂದು ಕೋಟಿ ಮೂವತ್ತು ಲಕ್ಷ ರೂಪಾಯಿ (1,30,000) ಗಳನ್ನು ಚೆಕ್‌ ರೂಪದಲ್ಲಿ ಪಡೆದು ಟರ್ಫ್‌ ಕ್ಲಬ್‌ನ ಅತ್ಯಂತ ಆಯಕಟ್ಟಿನ ಹುದ್ದೆಯಾದ ಸ್ಟಿವರ್ಡ್‌ ಹುದ್ದೆಗೆ ನಿಯೋಜಿಸುವ ಮೂಲಕ ಪ್ರಜಾ ಪ್ರತಿನಿಧಿಗಳ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದ ಆರೋಪಕ್ಕೆ ಗುರಿಯಾಗಿದ್ದರು.

ಹತ್ತಾರು ಸಾವಿರ ಕೋಟಿ ರೂಪಾಯಿ ವಹಿವಾಟನ್ನು ಹೊಂದಿರುವ ಟರ್ಫ್‌ ಕ್ಲಬ್‌ನ ಎಲ್ಲಾ ಆರ್ಥಿಕ ವ್ಯವಸ್ಥೆಯನ್ನು ನಿಭಾಯಿಸುವ ಸ್ಟಿವರ್ಡ್‌ ಹುದ್ದೆಗೆ ನಿಯೋಜನೆ ಮಾಡುವ ಮೂಲಕ ಸಿದ್ದರಾಮಯ್ಯ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಈ ಸಂಬಂಧ ಎನ್‌.ಆರ್‌ ರಮೇಶ್‌ 2022ರಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರಲ್ಲದೇ, ಜನಪ್ರತಿನಿಧಿಗಳ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರನ್ನೂ ಸಹ ದಾಖಲಿಸಿದ್ದರು.

WhatsApp Group Join Now
Telegram Group Join Now
Share This Article