ಬೆಂಗಳೂರು, ಆಗಸ್ಟ್.28: ಪಾಕಿಸ್ತಾನ್ ಸೇರಿ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು ಏರ್ಪೋರ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದೆ. ಜೊತೆಗೆ ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಮಂಕಿಪಾಕ್ಸ್ ಕಂಡು ಬಂದ್ರೆ 21 ದಿನಗಳ ಕಾಲ ಕ್ವಾರಂಟೈನ್ ಮಾಡಬೇಕು ಎಂದು ಖಡಕ್ ಸೂಚನೆ ನೀಡಲಾಗಿದೆ.
ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ಎಚ್ಚರವಹಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ಶಂಕಿತ ಪ್ರಕರಣಗಳು ಕಂಡು ಬಂದರೆ ಅವರನ್ನು ಐಸೋಲೇಟ್ ಮಾಡುವುದು, ಚಿಕಿತ್ಸೆ ನೀಡುವುದರ ಬಗ್ಗೆ ರಾಜ್ಯದ ಆರೋಗ್ಯ ಸಿಬ್ಬಂದಿ ಗಮನಹರಿಸುವಂತೆ ಸೂಚಿಸಿದ್ದಾರೆ.