1 ತಿಂಗಳೊಳಗೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇಕೇರ್ ಸೆಂಟರ್‌ ಆರಂಭ: ಆರೋಗ್ಯ ಸಚಿವ ದಿನೇಶ್ ಘೋಷಣೆ

Ravi Talawar
1 ತಿಂಗಳೊಳಗೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇಕೇರ್ ಸೆಂಟರ್‌ ಆರಂಭ: ಆರೋಗ್ಯ ಸಚಿವ ದಿನೇಶ್ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 28: ಮುಂದಿನ ತಿಂಗಳೊಳಗೆ ಕರ್ನಾಟಕದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇಕೇರ್ ಸೆಂಟರ್‌ಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಶವಾಗಾರ, ಅಡುಗೆ ಕೋಣೆ, ಬೋಧನಾ ಬ್ಲಾಕ್, ಲಾಂಡ್ರಿ ಬ್ಲಾಕ್ ಮತ್ತು ಜೈವಿಕ ವೈದ್ಯಕೀಯ ತ್ಯಾಜ್ಯ ಕೊಠಡಿ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದ್ದಾರೆ.

ಅಪಘಾತಕ್ಕೀಡಾದವರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ಆಂಬ್ಯುಲೆನ್ಸ್ ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಅಪಘಾತ ಸಂತ್ರಸ್ತರಿಗೆ ಮಾತ್ರ ಚಿಕಿತ್ಸೆ ನೀಡುವುದಕ್ಕಾಗಿ 65 ಆಂಬ್ಯುಲೆನ್ಸ್‌ಗಳು ಕಾರ್ಯನಿರ್ವಹಿಸಲಿವೆ. ಇದು ರಾಜ್ಯ ಸರ್ಕಾರದ ಹೊಸ ಯೋಜನೆಯಾಗಿದ್ದು, ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಅವರು ಸೇವೆಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
Share This Article