ಮಾಧ್ಯಮಗಳು ವಾಸ್ತವ ಸಂಗತಿಗಳಿಗೆ ಕನ್ನಡಿ ಹಿಡಿಯುವ ಕೆಲಸವನ್ನು ಮಾಡಬೇಕು: ಡಿ.ಕೆ.ಶಿವಕುಮಾರ್

Ravi Talawar
ಮಾಧ್ಯಮಗಳು ವಾಸ್ತವ ಸಂಗತಿಗಳಿಗೆ ಕನ್ನಡಿ ಹಿಡಿಯುವ ಕೆಲಸವನ್ನು  ಮಾಡಬೇಕು: ಡಿ.ಕೆ.ಶಿವಕುಮಾರ್
WhatsApp Group Join Now
Telegram Group Join Now

ಬೆಂಗಳೂರು: ಸುದ್ದಿಗಳ ವೈಭವೀಕರಣ ಮಾಡಬೇಡಿ. ವಾಸ್ತವ ಸಂಗತಿಗಳಿಗೆ ಕನ್ನಡಿ ಹಿಡಿಯುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ  ರಾಮನಗರ ಜಿಲ್ಲಾ ಘಟಕವು ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈಗ ಸಮಾಜದ ವೇಗ ಮಾಧ್ಯಮಕ್ಕಿಂತಲೂ ಹೆಚ್ಚಾಗಿದೆ. ಸಿಟಿಜನ್ ಜರ್ನಲಿಸಂ ಎಂಬ ಪರಿಕಲ್ಪನೆ ಆರಂಭವಾಗಿದ್ದು, ಹಳ್ಳಿಯಲ್ಲಿರುವ ಹುಡುಗ ತಮ್ಮ ವಿಚಾರವನ್ನು ತಾನೇ ವಿಡಿಯೋ ಮಾಡಿ ಪೋಸ್ಟ್ ಮಾಡುವ ವ್ಯವಸ್ಥೆ ಸೃಷ್ಟಿಯಾಗಿದೆ. ಹಾಗಾಗಿ ಮಾಧ್ಯಮಗಳಲ್ಲಿ ಸ್ಪರ್ಧೆ ಹೆಚ್ಚಾಗಿದೆ ಎಂದರು.

ತುಂಗಾಭದ್ರ ಅಣೆಕಟ್ಟೆ ಕ್ರಸ್ಟ್ ಗೇಟ್ ಮುರಿದಾಗ ವಿರೋಧ ಪಕ್ಷಗಳ ನಾಯಕರು ನಮ್ಮ ವಿರುದ್ಧ ಮುಗಿಬಿದ್ದರು. ನನ್ನಿಂದಲೇ ಗೇಟ್ ಮುರಿದಿರುವಂತೆ ಮಾತನಾಡಿದರು. ನಾನು ಆಗ ಅವರಿಗೆ ಉತ್ತರ ನೀಡಲಿಲ್ಲ. ಐದು ದಿನಗಳಲ್ಲೇ ಗೇಟ್ ದುರಸ್ತಿ ಮಾಡಿಸಿದೆವು. ಆಗ ನಾನು ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ ಎಂದು ಉತ್ತರ ಕೊಟ್ಟಿದ್ದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತೆ ಆಣೆಕಟ್ಟು ತುಂಬಲಿದೆ ಎಂದರು.

WhatsApp Group Join Now
Telegram Group Join Now
Share This Article