ಅಹ್ಮದ್ನಗರ: ಮುಸ್ಲಿಮರನ್ನು ಹುಡುಕಿ ಕೊಲ್ಲುತ್ತೇವೆ ಎಂದು ಹೇಳಿಕೆ ನೀಡಿರುವ ಬಿಜೆಪಿ ಶಾಸಕ ನಿತೀಶ್ ರಾಣೆ ವಿರುದ್ಧ ಪ್ರಕರಣ ದಾಖಲಾಗಿದೆ. ರಾಣೆ ಅವರು ಉದ್ರೇಕಕಾರಿ ಭಾಷಣಗಳನ್ನು ನೀಡಿದ್ದಾರೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.
ಅವರ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಒಂದು ಪ್ರಕರಣ ಶ್ರೀರಾಮಪುರದಲ್ಲಿ ಮತ್ತು ಇನ್ನೊಂದು ತೋಪಖಾನಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.