ನವದೆಹಲಿ, ಸೆಪ್ಟೆಂಬರ್ 4: ಭಾರತ ಗ್ರೀನ್ ಹೈಡ್ರೋಜನ್ ಹಬ್ ಆಗಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ದೆಹಲಿಯಲ್ಲಿ ಸೆಪ್ಟೆಂಬರ್ 11ರಿಂದ 13ರ ವರೆಗೆ ನಡೆಯಲಿರುವ ಗ್ರೀನ್ ಹೈಡ್ರೋಜನ್ ಮಿಷನ್ ಅಂತಾರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗ್ರೀನ್ ಹೈಡ್ರೋಜನ್ ಹಬ್ನಿಂದ ಸುಸ್ಥಿರ ಭವಿಷ್ಯ ನಿರ್ಮಾಣ ಸಾಧ್ಯ. ಭೂಮಂಡಲ ಸುರಕ್ಷತೆ ವಿಚಾರದಲ್ಲಿ ಭಾರತ ಜಾಗತಿಕ ನಾಯಕನಾಗುತ್ತಿದೆ. ಅಭಿವೃದ್ಧಿ ಹೊಂದಿದ ದೇಶಗಳಂತೆ ಭಾರತವೂ ಹೊಸ ಆವಿಷ್ಕಾರ ಶುರುಮಾಡಿದೆ ಎಂದರು.
ಗ್ರೀನ್ ಹೈಡ್ರೋಜನ್ ಮಿಷನ್ ಅಂತಾರಾಷ್ಟ್ರೀಯ ಸಮ್ಮೇಳನದ ಉತ್ಪನ್ನ ಮತ್ತು ತಂತ್ರಜ್ಞಾನದ ಪ್ರದರ್ಶನದಲ್ಲಿ 120 ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. 150ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಭಾಷಿಕರು ಭಾಗವಹಿಸಲಿದ್ದಾರೆ.
ಗ್ರೀನ್ ಹೈಡ್ರೋಜನ್ ಸಂಬಂಧ ಯುರೋಪಿಯನ್ ಯೂನಿಯನ್, ಆಸ್ಟ್ರೇಲಿಯಾ, ಸಿಂಗಾಪುರ್ ಮತ್ತು ನೆದರ್ಲ್ಯಾಂಡ್ಸ್ ಬಗ್ಗೆ ಅಧಿವೇಶನಗಳಲ್ಲಿ ಚರ್ಚೆ ನಡೆಯಲಿದೆ.