ಬೆಂಗಳೂರು, ಸೆಪ್ಟೆಂಬರ್ 05: ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಗೃಹ ಸಚಿವಾಲಯಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದ ಬೆನ್ನೆಲ್ಲೇ ಇದೀಗ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಸರ್ಕಾರ ತಿಳಿಸಿದೆ. ರಾಜ್ಯ ಸರ್ಕಾರದ ಸಿಎಸ್ರಿಂದ ಪ್ರಕರಣದ ಬಗ್ಗೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.
ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ ಎಂದು ಸಚಿವೆ ಶೋಭಾ ಇತ್ತೀಚೆಗೆ ಆರೋಪ ಮಾಡಿದ್ದರು. ಜೊತೆಗೆ ಪತ್ರ ಕೂಡ ಬರೆದಿದ್ದರು. ಸದ್ಯ ಸಚಿವೆ ಶೋಭಾ ಕರಂದ್ಲಾಜೆ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಗೃಹ ಸಚಿವಾಲಯ ಪ್ರಕರಣದ ಮಾಹಿತಿ ನೀಡುವಂತೆ ಸೂಚಿಸಿದೆ.