ಇಂದು ಮಧ್ಯಾಹ್ನ 3.30ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ಅರ್ಜಿ ವಿಚಾರಣೆ

Ravi Talawar
ಇಂದು ಮಧ್ಯಾಹ್ನ 3.30ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ಅರ್ಜಿ ವಿಚಾರಣೆ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 9: ಮುಡಾ ಸಂಗ್ರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ತನಿಖೆಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಾಲ್ಕು ದಿನ ಈ ಅರ್ಜಿಯ ವಿಚಾರಣೆ ನಡೆದಿದ್ದು, ಬಹುತೇಕ ಅಂತ್ಯವಾಗಿದೆ. ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ದೂರುದಾರರ ಪರ ವಕೀಲರು ವಾದ ಅಂತ್ಯಗೊಳಿಸಿದ್ದಾರೆ. ಇದೀಗ ಇಂದು ಮತ್ತೆ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುತ್ತಿದ್ದು, ಸಿಎಂ ಆತಂಕ ಹೆಚ್ಚಿಸಿದೆ.

ಇಂದು ಮಧ್ಯಾಹ್ನ 3.30ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ಅರ್ಜಿ ವಿಚಾರಣೆ ನಡೆಯಲಿದೆ. ಸರ್ಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿಲಿದ್ದಾರೆ.

ವಿಷಯ ಏನಂದರೆ, ರಾಜ್ಯಪಾಲರ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಚಿವ ಸಂಪುಟ ಅಡ್ವೊಕೆಟ್ ಜನರಲ್‌ ಅಭಿಪ್ರಾಯ ಆಧರಿಸಿ ಶಿಫಾರಸು ಮಾಡಿತ್ತು. ಅಡ್ವೊಕೆಟ್ ಜನರಲ್ ನೀಡಿದ್ದ ಅಭಿಪ್ರಾಯದಂತೆ 91 ಪುಟಗಳ ಪ್ರತಿಕ್ರಿಯೆ ನೀಡಿತ್ತು. ಆದರೆ, ಶಿಫಾರಸು ಮಾಡುವಾಗ ಸಚಿವ ಸಂಪುಟ ತನ್ನ ವಿವೇಚನೆ ಬಳಸಿಲ್ಲ.

ಅಡ್ವೊಕೆಟ್ ಜನರಲ್ ಅಭಿಪ್ರಾಯವನ್ನೇ ಯಥಾವತ್ ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ. ಕಾಮಾ, ಫುಲ್ ಸ್ಟಾಪ್ ಕೂಡಾ ಬದಲಿಸಿಲ್ಲ ಅಂತಾ ತುಷಾರ್ ಮೆಹ್ತಾ ವಾದಿಸಿದ್ದಾರೆ. ಈ ವಾದಕ್ಕೆ ಅಡ್ವೊಕೆಟ್ ಜನರಲ್ ನೀಡಿದ್ದ ಕಾನೂನು ಅಭಿಪ್ರಾಯದ ಕುರಿತು ಇಂದು ವಾದ ನಡೆಯಲಿದೆ. ಶಶಿಕಿರಣ್ ಶೆಟ್ಟಿ ಸರ್ಕಾರದ ಕ್ರಮ ಮತ್ತು ತಮ್ಮ ಲೀಗಲ್ ಒಪಿನಿಯನ್ ಸಮರ್ಥಿಸಿಕೊಳ್ಳಲಿದ್ದಾರೆ.

WhatsApp Group Join Now
Telegram Group Join Now
Share This Article