ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕದಲ್ಲಿ 60 ಲಕ್ಷ ರೇಷನ್ ಕಾರ್ಡ್ ರದ್ದುಪಡಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ. 5 ಗ್ಯಾರಂಟಿಗಳಿಗೆ ಕೊಡಲು ಇವರ ಬಳಿ ಹಣವಿಲ್ಲ ಎಂದು ಪ್ರತಿಕ್ಷ ನಾಯಕ ಆರ್ ಅಶೋಕ್ ಟೀಕಿಸಿದರು. ದೆಹಲಿಗೆ ತೆರಳುವ ಮುನ್ನ ವಿಮಾನ ನಿಲ್ದಾಣದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಮ್ಮ ರೇಷನ್ ಕಾರ್ಡ್ ಕಿತ್ತುಕೊಳ್ಳುತ್ತಿದ್ದಾರೆಂದು ಬಡ ಜನರು ಆತಂಕಕ್ಕೀಡಾಗಿದ್ದಾರೆ. ಈ ವಿಚಾರದಲ್ಲಿ ಎಲ್ಲೆಡೆ ಗೊಂದಲ ಸೃಷ್ಟಿಯಾಗಿದೆ ಎಂದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉದ್ಯಮಸ್ನೇಹಿ ವಾತಾವರಣವನ್ನು ಹಾಳು ಮಾಡಿದೆ ಎಂದು ಬಿಜೆಪಿ ಟೀಕಿಸಿದೆ. ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ಅಸಮರ್ಪಕ ಆಡಳಿತದಿಂದ ಅನೇಕ ಉದ್ಯಮಗಳು ರಾಜ್ಯ ತೊರೆದು ಬೇರೆ ಕಡೆ ಹೋಗುತ್ತಿವೆ ಎಂದೂ ಬಿಜೆಪಿ ಎಕ್ಸ್ ಸಂದೇಶದ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.