ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್​ ಪ್ರತಿಭಟನೆ

Ravi Talawar
ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್​ ಪ್ರತಿಭಟನೆ
WhatsApp Group Join Now
Telegram Group Join Now

ಶಿಮ್ಲಾ: ಇಲ್ಲಿನ ಸಂಜೌಲಿ ಪ್ರದೇಶದಲ್ಲಿ ಅನ್ಯ ಕೋಮಿನವರು ಅಕ್ರಮವಾಗಿ ಪ್ರಾರ್ಥನಾ ಮಂದಿರ ನಿರ್ಮಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಂಜೌಲಿಯಲ್ಲಿ ಪೊಲೀಸರು ಇಂದು ಬಿಎನ್​ಎಸ್​ ಸೆಕ್ಷನ್​ 163 (ನಿಷೇಧಾಜ್ಞೆ) ಜಾರಿ ಮಾಡಿದ್ದಾರೆ. ಬೆಳಗ್ಗೆ 7ರಿಂದ ರಾತ್ರಿ 11.59ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಶಿಮ್ಲಾ ಜಿಲ್ಲಾಧಿಕಾರಿ ಅನೂಪ್​ ಕಶ್ಯಪ್​ ತಿಳಿಸಿದ್ದಾರೆ.

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಜೌಲಿ ನಗರದಲ್ಲಿ ಯಾವುದೇ ಅನುಮತಿ ಇಲ್ಲದೇ ಘೋಷಣೆ, ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶವಿಲ್ಲ. ಶಸಾಸ್ತ್ರಗಳು ಹಾಗೂ ದಹನಶೀಲ ವಸ್ತುಗಳನ್ನು ಸಾಗಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ನಗರದ ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್​ ಹಾಕಲಾಗಿದ್ದು, ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅಕ್ರಮವಾಗಿ ನಿರ್ಮಿಸಿರುವ ಪ್ರಾರ್ಥನಾ ಮಂದಿರವನ್ನು ತೆರವುಗೊಳಿಸಬೇಕು. ರಾಜ್ಯಕ್ಕೆ ಆಗಮಿಸುವ ಹೊರಗಿನವರ ನೋಂದಣಿ ಮಾಡಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ಈ ಕುರಿತು ಮಾತನಾಡಿರುವ ಸಿಎಂ ಸುಖ್ವೀಂದರ್​ ಸಿಂಗ್​ ಸುಖು, “ಜನರಿಗೆ ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ಯಾವುದೇ ಸಮುದಾಯದಿಂದ ಯಾವುದೇ ಹಾನಿ ಆಗಬಾರದು. ಜನರು ಇದಕ್ಕೆ ಯಾವುದೇ ರಾಜಕೀಯ ಬಣ್ಣ ನೀಡದೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು” ಎಂದು ಮನವಿ ಮಾಡಿದ್ದಾರೆ. (ಐಎಎನ್​ಎಸ್​)
WhatsApp Group Join Now
Telegram Group Join Now
Share This Article