ನಾಗಮಂಗಲದಲ್ಲಿ ನಡೆದ ಗಲಭೆ ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್​ನವರ ಪೂರ್ವನಿಯೋಜಿತ ಹುನ್ನಾರ: ಎಂ.ಲಕ್ಷ್ಮಣ ಗಂಭೀರ ಆರೋಪ

Ravi Talawar
ನಾಗಮಂಗಲದಲ್ಲಿ ನಡೆದ ಗಲಭೆ ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್​ನವರ ಪೂರ್ವನಿಯೋಜಿತ ಹುನ್ನಾರ: ಎಂ.ಲಕ್ಷ್ಮಣ ಗಂಭೀರ ಆರೋಪ
WhatsApp Group Join Now
Telegram Group Join Now

ಮೈಸೂರು, ಸೆಪ್ಟೆಂಬರ್ 13: ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಭೆ ಪೂರ್ವನಿಯೋಜಿತ. ಗಲಭೆಗೆ ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್​ನವರು ಹುನ್ನಾರ ಮಾಡಿದ್ದರು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್​ ಸಂಚನ್ನು ವಿಫಲಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ನಾಗಮಂಗಲ ಪಟ್ಟಣದಲ್ಲಿ ಗಲಭೆ ಮಾಡಿ ಸ್ವಲ್ಪ ಮಟ್ಟಿಗೆ ಯಶಸ್ವಿಯಾಗಿದ್ದಾರೆ ಎಂದರು.

ಮೊದಲು ಮೈಸೂರಿನಲ್ಲಿ ಕೋಮು ಗಲಭೆ‌ಗೆ ಸಂಚು ಹೂಡಿದ್ದರು. ಅಲ್ಲಿ ಅವರ ಪ್ಲ್ಯಾನ್​ ವಿಫಲವಾಗಿದೆ‌. ನಾಗಮಂಗಲದಲ್ಲಿ ನಡೆದ ಕೃತ್ಯದಲ್ಲಿ ಶಾಮೀಲಾಗಿದ್ದು ಯುವಕರು. 20 ಜನ ಹಿಂದೂಗಳು, 30 ಜನ ಮುಸ್ಲಿಮರು ಭಾಗಿಯಾಗಿದ್ದಾರೆ. ಇದು ಆರ್​ಎಸ್​ಎಸ್, ಬಿಜೆಪಿ, ಜೆಡಿಎಸ್ ಪೂರ್ವ ನಿಯೋಜಿತ ಕೃತ್ಯ. ಈ ಕುರಿತು ಗೃಹ ಸಚಿವರು ದಾಖಲೆ ಬಿಡುಗಡೆ ಮಾಡಲಿದ್ದಾರೆ ಎಂದರು.

ನಾಗಮಂಗಲಕ್ಕೆ ಹೋಗಿ ಪ್ರಚೋದನಕಾರಿ ಹೇಳಿಕೆ ಕೊಟ್ಟಿದ್ದಾರೆ‌. ವಿಜಯೇಂದ್ರ, ಅಶೋಕ್​ ಒಂದು ಸಮುದಾಯವನ್ನು ಬೈದಿದ್ದಾರೆ. ಇವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಎಂ.ಲಕ್ಷ್ಮಣ ಆಗ್ರಹಿಸಿದರು.

WhatsApp Group Join Now
Telegram Group Join Now
Share This Article