ಬೆಂಗಳೂರು, ಸೆಪ್ಟೆಂಬರ್ 14: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನವಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿ ಎಸ್ಐಟಿ 120 ಸಾಕ್ಷಿಗಳ 1691 ಪುಟಗಳ ಚಾರ್ಜ್ಶೀಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಎಸ್ಐಟಿ ಚಾರ್ಜ್ಶೀಟ್ನಲ್ಲಿ ಪ್ರಜ್ವಲ್ ರೇವಣ್ಣ ಕಾಮಕಾಂಡ ಬಯಲಾಗಿದೆ.
ಜಿ.ಪಂ ಮಾಜಿ ಸದಸ್ಯೆಗೆ ಬೆದರಿಸಿ ಪ್ರಜ್ವಲ್ ರೇವಣ್ಣನಿಂದ ಲೈಂಗಿಕ ದೌರ್ಜನ್ಯ; ಮೂರನೇ ಚಾರ್ಜ್ಶೀಟ್ ಸಲ್ಲಿಕೆ
ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಜೆಡಿಎಸ್ ಪಕ್ಷದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ಎಸ್ಐಟಿ ತನಿಖೆಯಲ್ಲಿ ಸಾಬೀತಾಗಿದೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರಿಗೆ ಸರ್ಕಾರ ಹಂಚಿಕೆ ಮಾಡಿದ್ದ ಹಾಸನದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅತಿಥಿ ಗೃಹದಲ್ಲಿ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ.