ಬೆಂಗಳೂರು: ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗವನ್ನು ನಡುಗಿಸಿದೆ. ಮಾಲಿವುಡ್ನ ಕರಾಳ ಮುಖವನ್ನು ಈ ವರದಿ ಬಲಿಗೆಳೆದಿದ್ದು, ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲೂ ಸಮಿತಿ ರಚನೆ ಆಗಬೇಕೆಂಬ ಬೇಡಿಕೆಗಳು ಬಂದಿವೆ. ಕಮಿಟಿ ರಚನೆಗೆ ಇತ್ತೀಚೆಗಷ್ಟೇ ‘ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ’ (ಫೈರ್) ನಿಯೋಗ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತ್ತು. ಇದೀಗ ಈ ಬಗ್ಗೆ ಫಿಲ್ಮ್ ಚೇಂಬರ್ನಲ್ಲಿ ಮಹತ್ವದ ಸಭೆ ನಡೆಯುತ್ತಿದೆ.
ಫಿಲ್ಮ್ ಚೇಂಬರ್ನಲ್ಲಿ ಸಭೆ ಶುರುವಾಗಿದ್ದು, ಕಮಿಟಿ ಬೇಕೋ? ಬೇಡವೋ ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಎನ್ಎಮ್ ಸುರೇಶ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ನೇತೃತ್ವದಲ್ಲಿ ಈ ಮೀಟಿಂಗ್ ನಡೆಯುತ್ತಿದ್ದು, ಫಿಲ್ಮ್ ಚೇಂಬರ್ ಪಧಾದಿಕಾರಿಗಳು ಭಾಗಿಯಾಗಿದ್ದಾರೆ.