ಕಲಬುರಗಿಯನ್ನು ಸ್ಮಾರ್ಟ್​ ಸಿಟಿ ಮಾಡಲು 1685 ಕೋಟಿ ರೂ: ಸಿಎಂ ಸಿದ್ದರಾಮಯ್ಯ ಘೋಷಣೆ

Ravi Talawar
ಕಲಬುರಗಿಯನ್ನು ಸ್ಮಾರ್ಟ್​ ಸಿಟಿ ಮಾಡಲು 1685 ಕೋಟಿ ರೂ: ಸಿಎಂ ಸಿದ್ದರಾಮಯ್ಯ ಘೋಷಣೆ
WhatsApp Group Join Now
Telegram Group Join Now

ಕಲಬುರಗಿ, ಸೆಪ್ಟೆಂಬರ್ 17: ಕಲಬುರಗಿಯನ್ನು 1685 ಕೋಟಿ ರೂ. ವೆಚ್ಚದ ಯೋಜನೆಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದಲೇ ಸ್ಮಾರ್ಟ್​ ಸಿಟಿಯನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್​​ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ. ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ಪಡಿಸಲು ಯೋಜನೆ ಹಾಗೂ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 1 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.

ಕಲಬುರಗಿ ಜಯದೇವ ಆಸ್ಪತ್ರೆ ಉದ್ಘಾಟನಾ ಹಂತದಲ್ಲಿದೆ. ಇಂದಿರಾ ಗಾಂಧಿ ಚೈಲ್ಡ್ ಕೇರ್ ಘಟಕಕ್ಕೂ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಇಂದಿರಾಗಾಂಧಿ ಚೈಲ್ಡ್ ಕೇರ್ ಘಟಕಕ್ಕೂ ಅನುಮೋದನೆ ನೀಡಿದ್ದೇವೆ. ಆ ಮೂಲಕ ಕಲಬುರಗಿಯನ್ನು ರೀಜನಲ್ ಹೆಲ್ತ್ ಹಬ್ ಮಾಡುವತ್ತ ಹೆಜ್ಜೆ ಇಟ್ಟಿದ್ದೇವೆ. ಈ ಭಾಗದ ಶೈಕ್ಷಣಿಕ ಪರಿಸ್ಥಿತಿ ಸುಧಾರಿಸಲು 2023-24 ಅನ್ನು ‘Year of education’ ಎಂದು ಘೋಷಣೆ ಮಾಡಿದ್ದೇವೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ‘ಅಕ್ಷರ ಅವಿಷ್ಕಾರ ಯೋಜನೆ’ ಜಾರಿಗೊಳಿಸಿದ್ದೇವೆ ಎಂದರು

ಜೊತೆಗೆ ಮೆಗಾ ಟೆಕ್ಸಟೈಲ್ಸ್ ಪಾರ್ಕ್, ಅತ್ಯಾಧುನಿಕ ಇನ್​ಕ್ಯುಬೇಷನ್ ಕೌಶಲ ಕೇಂದ್ರಗಳನ್ನು ತೆರೆಯುತ್ತಿದ್ದೇವೆ. ಹತ್ತು ವರ್ಷಗಳ ಬಳಿಕ ಇಂದು ಸಂಪುಟ ಸಭೆ ನಡೆಸುತ್ತಿದ್ದೇವೆ. ಸಭೆಯಲ್ಲಿ ಈ ಭಾಗದ ಶಿಕ್ಷಣ, ಆರೋಗ್ಯ, ಸಾರಿಗೆ, ನೀರಾವರಿ ಹಾಗೂ ಮೂಕಭೂತ ಸೌಕರ್ಯದ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಇಂದು ಸಂಜೆ ನಡೆಯುವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ತೆಗೆದುಕೊಳ್ಳುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಬಳ್ಳಾರಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗೆ 200 ಕೋಟಿ ಅನುದಾನ ನೀಡುವ ಬಗ್ಗೆಯೂ ಭರವಸೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article