ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆ ವತಿಯಿಂದ “ಸೇವಾ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆ ವತಿಯಿಂದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ “ಸೇವಾ ಪಾಕ್ಷಿಕ ಅಭಿಯಾನ” ಅಂಗವಾಗಿ ರಾಜಹಂಸಗಡದಲ್ಲಿರುವ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಹಿಂದೂ ಧರ್ಮದ ಪ್ರಬಲ ಪ್ರತಿಪಾದಕರಾದ ಛತ್ರಪತಿ ಶಿವಾಜಿ ಮಹಾರಾಜರಿಗೆ ಗೌರವ ನಮನಗಳನ್ನು ಸಲ್ಲಿಸಲಾಯಿತು. ನಂತರ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಸಸಿ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಮಾಜಿ ಶಾಸಕರಾದ ಸಂಜಯ್ ಪಾಟೀಲ ಅವರ ನೇತೃತ್ವದಲ್ಲಿ ಸಿದ್ದೇಶ್ವರ ದೇವಸ್ಥಾನದಲ್ಲಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು ಮೋದಿ ಅವರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ, ಶಕ್ತಿ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮಲ್ಲಿಕಾರ್ಜುನ್ ಮಾದಮ್ಮನವರ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ, ಮಹಾಂತೇಶ್ ಚಿನ್ನಪ್ಪಗೌಡರ, ಶ್ರೀ ದಾದಾಗೌಡ ಬಿರಾದಾರ, ವೀರಭದ್ರಯ್ಯ ಪೂಜಾರಿ, ಗುರು ಹಿರೇಮಠ , ಆನಂದ್ ಅತ್ತುಗೋಳ , ಚೇತನ್ ಪಾಟೀಲ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.