700 ಕೋಟಿ ಮೌಲ್ಯದ ಅರಣ್ಯ ಭೂಮಿ ಒತ್ತುವರಿ; ಕೊತ್ತನೂರು ಸರ್ವೆ ನಂ.48ರ ಅರಣ್ಯ ಭೂಮಿ ವಶಕ್ಕೆ ಈಶ್ವರ ಖಂಡ್ರೆ ಸೂಚನೆ

Ravi Talawar
700 ಕೋಟಿ ಮೌಲ್ಯದ ಅರಣ್ಯ ಭೂಮಿ ಒತ್ತುವರಿ;  ಕೊತ್ತನೂರು ಸರ್ವೆ ನಂ.48ರ ಅರಣ್ಯ ಭೂಮಿ ವಶಕ್ಕೆ ಈಶ್ವರ ಖಂಡ್ರೆ ಸೂಚನೆ
WhatsApp Group Join Now
Telegram Group Join Now

ಸುಮಾರು 700 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ

ಕೊತ್ತನೂರು ಸರ್ವೆ ನಂ.48ರ ಅರಣ್ಯ ಭೂಮಿ ವಶಕ್ಕೆ ಈಶ್ವರ ಖಂಡ್ರೆ ಸೂಚನ

ಬೆಂಗಳೂರು, ಸೆ.20: ರಾಜಧಾನಿ ಬೆಂಗಳೂರು, ಪೂರ್ವ ತಾಲೂಕು, ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22. ಎಕರೆ 8 ಗುಂಟೆ ಜಮೀನಿನ ಮರು ವಶಕ್ಕೆ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 1999-2000 ಸಾಲಿನಲ್ಲಿ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ. ಆದರೆ ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲವಾಗಿರುವ ಇಲಾಖೆಯ ಹಿಂದಿನ ಅಧಿಕಾರಿಗಳ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆಗೆ ಮಂಜೂರಾದ 22.08 ಎಕರೆ ಭೂಮಿಯ ಪೈಕಿ 13 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಸಂಖ್ಯೆ ಆರ್.ಎಚ್.ಎಸ್.(2) 44/82-83 ಡಿ.ಟಿ. 25.01.2000ರ ಆದೇಶದಂತೆ ಪಹಣಿ (ಆರ್.ಟಿ.ಸಿ.)ಯಲ್ಲಿ ನಮೂದಾಗಿದೆ. ಈ ಜಮೀನಿನ ನಕ್ಷೆ ಪಡೆದು ಉಳಿದ 9 ಎಕರೆಯ ದಾಖಲೆಗಳನ್ನೂ ಮಾಡಿಸಿ, ಸುಮಾರು 700 ಕೋಟಿ ರೂ. ಬೆಲೆ ಬಾಳುವ ಜಮೀನು ಒತ್ತುವರಿಯಾಗಿದ್ದರೆ ಅದನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು 64(ಎ) ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಈಶ್ವರ ಖಂಡ್ರೆ ಟಿಪ್ಪಣಿಯನ್ನೂ ನೀಡಿದ್ದಾರೆ.

ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾದ ಬಳಿಕ ಇದೇ ಕೊತ್ತನೂರು ಗ್ರಾಮದ ಸರ್ವೆ ನಂಬರ್ 47ರಲ್ಲಿ 2006ರಲ್ಲಿ ಅರಣ್ಯ ಇಲಾಖೆಗೆ ಮಂಜೂರಾಗಿ ಒತ್ತುವರಿಯಾಗಿದ್ದ 17 ಎಕರೆ 34 ಗುಂಟೆ ಜಮೀನನ್ನು ಮರು ವಶಪಡಿಸಿಕೊಂಡು ಇಲ್ಲಿ ಸಸ್ಯೋದ್ಯಾನ ಮತ್ತು ಪಕ್ಷಿಲೋಕ ನಿರ್ಮಿಸಲು ಶಂಕುಸ್ಥಾಪನೆಯನ್ನೂ ನೆರೆವೇರಿಸಿದ್ದರು.

ಅರಣ್ಯ ಇಲಾಖೆಗೆ ಮಂಜೂರಾಗಿದ್ದ ಈ ಭೂಮಿಯನ್ನು 17 ವರ್ಷಗಳ ತರುವಾಯ 2023ರ ಜನವರಿಯಲ್ಲಿ ಅಂದಿನ ಉಪ ವಿಭಾಗಾಧಿಕಾರಿಯಾಗಿದ್ದ ಎಂ.ಜಿ. ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ರೈ ಏಕಪಕ್ಷೀಯವಾಗಿ ‘ಸರ್ಕಾರಿ ಭೂಮಿ’ ಎಂದು ಬದಲಾಯಿಸಿ. ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡಿದ್ದರು.

ಕಾನೂನು ಬಾಹೀರವಾಗಿ ಅರಣ್ಯ ಭೂಮಿಯನ್ನು ಕಂದಾಯ ಎಂದು ಮಾರ್ಪಾಡು ಮಾಡಿದ್ದ ಅಂದಿನ ಅಸಿಸ್ಟೆಂಟ್ ಕಮಿಷನರ್ ಮತ್ತು ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶ ನೀಡಿದ್ದರು. ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

WhatsApp Group Join Now
Telegram Group Join Now
Share This Article