ಪ್ರಧಾನಿ ಮೋದಿ ಅವರು ಇಂದಿನಿಂದ (ಸೆ.21) ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ತವರೂರು ವಿಲ್ಮಿಂಗ್ಟನ್‌ನಲ್ಲಿ ಕ್ವಾಡ್ ಶೃಂಗಸಭೆ ಸಭೆಯನ್ನು ಆಯೋಜಿಸಲಾಗಿದೆ. ಕ್ವಾಡ್ ಶೃಂಗಸಭೆಯಲ್ಲಿ ನನ್ನ ಸ್ನೇಹಿತರಾದ ಅಧ್ಯಕ್ಷ ಬೈಡನ್, ಪ್ರಧಾನಿ ಅಲ್ಬನೀಸ್ ಮತ್ತು ಪ್ರಧಾನಿ ಕಿಶಿದಾ ಅವರನ್ನು ನಾನು ಎದುರು ನೋಡುತ್ತಿದ್ದಾನೆ ಎಂದು ಮೋದಿ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಈ ವೇದಿಕೆಯು ಶಾಂತಿಯನ್ನು ಉತ್ತೇಜಿಸುವ ಸಮಾನ ಮನಸ್ಕ ರಾಷ್ಟ್ರಗಳ ವೇದಿಕೆಯಾಗಲಿದೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಪ್ರಗತಿ, ಮತ್ತು ಸಮೃದ್ಧಿ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಿದ್ದೇವೆ ಎಂದು ಹೇಳಿದ್ದಾರೆ.