ಇಂದಿನಿಂದ ಧಾರವಾಡದಲ್ಲಿ 4 ದಿನ ಕೃಷಿ ಮೇಳ

Ravi Talawar
ಇಂದಿನಿಂದ ಧಾರವಾಡದಲ್ಲಿ 4 ದಿನ ಕೃಷಿ ಮೇಳ
WhatsApp Group Join Now
Telegram Group Join Now

ಧಾರವಾಡ, ಸೆಪ್ಟೆಂಬರ್​ 21: “ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು” ಈ ಬಾರಿಯ ಕೃಷಿ ಮೇಳದ ಘೋಷವಾಕ್ಯವಾಗಿದೆ. ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಹೆಸರಿನ ಘೋಷವಾಕ್ಯದಲ್ಲಿ ರೈತರ ಜಾತ್ರೆ ಎನಿಸಿರುವ ಧಾರವಾಡ ಕೃಷಿ ಮೇಳ ಇಂದಿನಿಂದ (ಸೆ.21 ರಿಂದ 24)ರವರೆಗೆ ನಾಲ್ಕು ದಿನ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಕಳೆದ ಎರಡು ತಿಂಗಳಿಂದ ಈ ಮೇಳಕ್ಕಾಗಿ ಸಿದ್ಧತೆ ನಡೆದಿದೆ.

ಏನೇನು ಪ್ರದರ್ಶನ?

ಮೇಳದ ಪ್ರಮುಖ ಆಕರ್ಷಣೆ ಕೃಷಿ ವಸ್ತು ಪ್ರದರ್ಶನ. ಇದರಲ್ಲಿ 150 ಹೈಟೆಕ್ ಮಳಿಗೆ, 241 ಸಾಮಾನ್ಯ ಮಳಿಗೆ, 110 ಯಂತ್ರೋಪಕರಣ ಮಳಿಗೆ, 27 ಟ್ರ್ಯಾಕ್ಟರ್, ಭಾರಿ ಯಂತ್ರೋಪಕರಣಗಳ ಮಳಿಗೆ ಹಾಗೂ 28 ಆಹಾರ ಮಳಿಗೆಗಳು ಇರಲಿವೆ. ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿ ಹಾಗೂ ಕೃಷಿ ತಾಂತ್ರಿಕತೆಗಳು ಸಮಗ್ರ ಬೆಳೆ ನಿರ್ವಹಣೆ, ಜೈವಿಕ ಗೊಬ್ಬರ ಹಾಗೂ ಪೀಡೆನಾಶಕಗಳು, ಎಣ್ಣೆಕಾಳು, ದ್ವಿದಳ ಧಾನ್ಯಗಳು ಮತ್ತು ಹಿಂಗಾರು ಬೆಳೆಗಳ ತಾಂತ್ರಿಕತೆಗಳು, ಮಳೆ ನೀರು ಕೊಯ್ಲು ಮತ್ತು ಅಂತರ್ಜಲ ಮರುಪೂರಣ, ನೈಸರ್ಗಿಕ ಕೃಷಿ, ಸಾವಯವ ಕೃಷಿ ಮತ್ತು ಮಣ್ಣಿನ ಫಲವತ್ತತೆ ಸಂರಕ್ಷಣೆ, ಹೈಟೆಕ್ ತೋಟಗಾರಿಕೆ, ಫಲ-ಪುಷ್ಪ ಪ್ರದರ್ಶನ ಇರುತ್ತದೆ.

WhatsApp Group Join Now
Telegram Group Join Now
Share This Article