ಟ್ರಾಫಿಕ್ ರೂಲ್ಸ್ ಪಾಲಿಸದಿದ್ದರೆ ಲೈಸೆನ್ಸ್ ಕ್ಯಾನ್ಸಲ್: ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನ್

Ravi Talawar
ಟ್ರಾಫಿಕ್ ರೂಲ್ಸ್ ಪಾಲಿಸದಿದ್ದರೆ ಲೈಸೆನ್ಸ್ ಕ್ಯಾನ್ಸಲ್: ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನ್
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 23: ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಗೆ ಖಡಕ್‌ ಸೂಚನೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿ, ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದರು.

ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ‌ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ‌ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು.

ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.

WhatsApp Group Join Now
Telegram Group Join Now
Share This Article