ಮಹಾರಾಷ್ಟ್ರದಾದ್ಯಂತ ಭಾರಿ ಮಳೆ; ಪ್ರಧಾನಿ ಮೋದಿ ಪುಣೆ ಭೇಟಿ ರದ್ದು

Ravi Talawar
ಮಹಾರಾಷ್ಟ್ರದಾದ್ಯಂತ ಭಾರಿ ಮಳೆ; ಪ್ರಧಾನಿ ಮೋದಿ ಪುಣೆ ಭೇಟಿ ರದ್ದು
WhatsApp Group Join Now
Telegram Group Join Now

ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಪುಣೆ ಭೇಟಿ ರದ್ದುಗೊಂಡಿದೆ. ಪುಣೆಯಲ್ಲಿ ನಿರ್ಮಾಣವಾಗಿರುವ ಮೆಟ್ರೋ ಮಾರ್ಗದ ಉದ್ಘಾಟನೆಗೆ ಪ್ರಧಾನಿ ಬರಬೇಕಿತ್ತು. ಭಾರಿ ಮಳೆ ಹಿನ್ನೆಯಲ್ಲಿ ಮುಂಬೈಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಗುರುವಾರ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಲವು ರಸ್ತೆಗಳು ಮುಳುಗಿವೆ. ಇಷ್ಟೇ ಅಲ್ಲ, ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಹಲವು ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನಗಳು ನಿಧಾನವಾಗಿ ಸಂಚರಿಸಿದವು.

ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್, ಇಂಡಿಗೋ ಮತ್ತು ವಿಸ್ತಾರಾ ವಿಮಾನಗಳ ಮೇಲೆ ಪರಿಣಾಮ ಬೀರಿತು. ವಾಯು ಸೇವೆ ಒದಗಿಸುವ ಕಂಪನಿಗಳು ಹವಾಮಾನದ ಬದಲಾವಣೆಯಿಂದ ಪರಿಣಾಮ ಬೀರುವ ವಿಮಾನಗಳ ಹೊಸ ಸ್ಥಿತಿಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ಹಂಚಿಕೊಂಡಿವೆ.

ಮುಂಬೈ ಮತ್ತು ನೆರೆಯ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಮುಂಬೈ, ಥಾಣೆ, ರಾಯಗಢ ಮತ್ತು ರತ್ನಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

WhatsApp Group Join Now
Telegram Group Join Now
Share This Article