ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

Ravi Talawar
ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ
WhatsApp Group Join Now
Telegram Group Join Now

ನನ್ನ ಮೇಲೆರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು

ಮೈಸೂರು, ಸೆಪ್ಟೆಂಬರ್ 27 : ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನಾಮಾಂಕಿತರಾಗಿದ್ದು, ಯಾವುದು ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ . ಈ ವಿಷಯದ ಕುರಿತು ರಾಷ್ಟ್ರಾದ್ಯಂತ ಚರ್ಚೆಯಾಗಬೇಕು ಎಂದರು.

*ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು*

ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು. ನನ್ನ ಮೇಲಿನ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷ

WhatsApp Group Join Now
Telegram Group Join Now
Share This Article