ಗಾಂಧಿ ಕಾಂಗ್ರೆಸ್​ ನಾಯಕತ್ವಕ್ಕೆ 100 ವರ್ಷ; ಪಕ್ಷ ಮತ್ತು ಸರ್ಕಾರದಿಂದ ಗಾಂಧಿ ನಡಿಗೆ

Ravi Talawar
ಗಾಂಧಿ ಕಾಂಗ್ರೆಸ್​ ನಾಯಕತ್ವಕ್ಕೆ 100 ವರ್ಷ; ಪಕ್ಷ ಮತ್ತು ಸರ್ಕಾರದಿಂದ ಗಾಂಧಿ ನಡಿಗೆ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್​ 30: ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಮಹಾತ್ಮ ಗಾಂಧಿಯವರು  ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡು ಈ ವರ್ಷಕ್ಕೆ 100 ವರ್ಷ ಆಗುತ್ತದೆ. ಮತ್ತು ಮಹಾತ್ಮಾ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮ ಆರಂಭಿಸಿ 100 ವರ್ಷಗಳು ತುಂಬಿದೆ. ಮಹಾತ್ಮ ಗಾಂಧಿಯವರು ಕಾಂಗ್ರೆಸ್​ನ  ನಾಯಕತ್ವ ವಹಿಸಿಕೊಂಡ ಮೇಲೆ ದೇಶಕ್ಕೆ ಹೊಸ ಹುರುಪು ಬಂತು. ಈ ಹಿನ್ನೆಲೆಯಲ್ಲಿ ಈ ವರ್ಷ ಸರ್ಕಾರ ಮತ್ತು ಪಕ್ಷದ ವತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷ ಮತ್ತು ಸರ್ಕಾರ ಪ್ರತ್ಯೇಕವಾಗಿ ಕಾರ್ಯಕ್ರಮ ನಡೆಸಲು‌ ತೀರ್ಮಾನ ಮಾಡಿದ್ದೇವೆ. ಮಹತ್ಮಾ ಗಾಂಧಿಯವರ ಜನ್ಮದಿನ ಅಕ್ಟೋಬರ್​ 2ರಂದು ಗಾಂಧಿ ನಡಿಗೆ ಹಮ್ಮಿಕೊಂಡಿದ್ದೇವೆ. ಅಂದು ಬೆಳಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ಒಂದೂವರೆ ಕಿಮೀ ನಡೆಯುತ್ತೇವೆ. ಟೌನ್ ಹಾಲ್​​ನಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪಕ್ಷದ ಎಲ್ಲಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಶಿಕ್ಷಣ ಇಲಾಖೆ, ಸಂಸ್ಕೃತಿ ಇಲಾಖೆ ಮತ್ತು ಬಿಬಿಎಂಪಿ‌ ಒಟ್ಟಾಗಿ ಕಾರ್ಯಕ್ರಮ ಮಾಡುತ್ತೇವೆ. ಇದೇ ಕಾರ್ಯಕ್ರಮ ರಾಜ್ಯಾದ್ಯಂತ ನಡೆಯಲಿದೆ ಎಂದರು.

ಕಾರ್ಯಮಕ್ಕೆ ಪ್ರತಿಯೊಬ್ಬರು ಬಿಳಿ ಟೋಪಿ, ಬಿಳಿ‌ ಬಟ್ಟೆ ಧರಿಸಿಕೊಂಡು ಬರಬೇಕು. ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜವನ್ನು ಮಾತ್ರ ಬಳಸಬೇಕು. ಕನ್ನಡ ಧ್ವಜ, ಪಕ್ಷದ ಬಾವುಟ ಯಾವುದನ್ನೂ ಬಳಸಬಾರದು ಎಂದು ಸೂಚನೆ ನೀಡಿದರು.

WhatsApp Group Join Now
Telegram Group Join Now
Share This Article